ನವದೆಹಲಿ:ರಾಷ್ಟ್ರಪತಿ ಚುನಾವಣೆಯಲ್ಲಿ ಆದಂತೆ ಉಪ ರಾಷ್ಟ್ರಪತಿ ಚುನಾವಣೆಯಲ್ಲೂ ಎನ್​ಡಿಎ ಬೆಂಬಲಿತ ಅಭ್ಯರ್ಥಿಗೇ ಗೆಲುವು ಒಲಿದಿದ್ದು, ಎನ್​ಡಿಎ ಬೆಂಬಲಿತ ಅಭ್ಯರ್ಥಿ ಜಗದೀಪ್ ಧನ್ಕರ್ ಉಪ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ.
ಧನ್ಕರ್ ಎದುರು ಪ್ರತಿಸ್ಪರ್ಧಿ, ಯುಪಿಎ ಬೆಂಬಲಿತ ಮಾರ್ಗರೆಟ್ ಆಳ್ವ ಪರಾಭವಗೊಂಡಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್, ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಜಗದೀಪ್​ 346 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಚಲಾವಣೆ ಆಗಿರುವ ಒಟ್ಟು ಮತಗಳ ಪೈಕಿ ಇವರು 528 ಮತಗಳನ್ನು ಪಡೆದಿದ್ದು, ಮಾರ್ಗರೆಟ್​​ಗೆ 182 ಮತಗಳು ಚಲಾವಣೆ ಆಗಿವೆ. ಅಲ್ಲದೆ 15 ಮತಗಳು ಅಸಿಂಧುವಾಗಿವೆ.
ಜಗದೀಪ್ ಹಿನ್ನೆಲೆ:ಜಗದೀಪ್ ಧನ್ಕರ್ (71) ರಾಜಸ್ಥಾನ ಮೂಲದವರು. 1951ರ ಮೇ 18ರಂದು ಕಿಥನಾ ಗ್ರಾಮದಲ್ಲಿ ಜನಿಸಿದ ಧನ್ಕರ್ ಚಿತ್ತೋರಗಢದ ಸೈನಿಕ ಶಾಲೆಯಲ್ಲಿ ಆರಂಭಿಕ ಶಿಕ್ಷಣ ಪೂರೈಸಿ, ಜೈಪುರದ ರಾಜಸ್ಥಾನ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ. ವಕೀಲಿ ವೃತ್ತಿ ಮಾಡುತ್ತಿದ್ದ ಅವರು, ರಾಜಸ್ಥಾನ ಹೈಕೋರ್ಟ್ ಬಾರ್ ಅಸೋಸಿಯೇಷನ್​ನ ಅಧ್ಯಕ್ಷರೂ ಆಗಿದ್ದರು. ಜನತಾ ದಳದ ಮೂಲಕ ರಾಜಕೀಯ ಪ್ರವೇಶ ಪಡೆದ ಧನ್ಕರ್, ಝುುಂಝುುನು ಕ್ಷೇತ್ರದಿಂದ 9ನೇ ಲೋಕಸಭೆಗೆ (1989-91) ಆಯ್ಕೆ ಆಗಿದ್ದರು. 1993-98ರ ಅವಧಿಯಲ್ಲಿ ರಾಜಸ್ಥಾನದ 10ನೇ ವಿಧಾನಸಭೆಗೆ ಕಿಷನ್​ಗಢದಿಂದ ಚುನಾಯಿತರಾಗಿದ್ದರು.
ನಂತರದಲ್ಲಿ ಬಿಜೆಪಿ ಜತೆ ಗುರುತಿಸಿಕೊಂಡ ಅವರನ್ನು 2019ರ ಜುಲೈ 30ರಂದು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯಪಾಲ ಧನ್ಕರ್ ನಡುವೆ ಆರಂಭದಿಂದಲೂ ಜಟಾಪಟಿ ಇದೆ. ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನು ಮಮತಾ ಬಹಿರಂಗವಾಗಿಯೇ ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಪದನಿಮಿತ್ತವಾಗಿ ರಾಜ್ಯದ ಎಲ್ಲ ವಿವಿಗಳ ಕುಲಾಧಿಪತಿಗಳೂ ಆಗಿರುತ್ತಾರೆ. ಆದರೆ, ಇತ್ತೀಚೆಗೆ ಈ ಅಧಿಕಾರವನ್ನು ಕಿತ್ತುಕೊಂಡು, ಮುಖ್ಯಮಂತ್ರಿಯೇ ಎಲ್ಲ ವಿವಿಗಳ ಕುಲಾಧಿಪತಿ ಎಂಬ ತಿದ್ದುಪಡಿ ಮಸೂದೆಗೆ ಟಿಎಂಸಿ ಸರ್ಕಾರ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿದೆ.
ವಿಚಿತ್ರ ಕಾಯಿಲೆಯಿಂದ ಸತ್ತಿದ್ದಾರೆ 61 ಮಂದಿ; ತನಿಖೆ ನಡೆಸಿ ಎಂದು ಕೋರಿಕೊಂಡ ಗ್ರಾಮಸ್ಥರು..

ನಿಮ್ಮೂರಿಗೀಗ ಅವರಲ್ಲ, ಇವರೇ ಇನ್​ಸ್ಪೆಕ್ಟರ್​; 13 ಡಿವೈಎಸ್​ಪಿಗಳೂ ಟ್ರಾನ್ಸ್​ಫರ್​..

ಚಲಿಸುತ್ತಿದ್ದ ಕಾರಿನ ಮೇಲೇ ಬಿದ್ದ ಮರ, ತಂದೆ-ಮಗ ಸ್ಥಳದಲ್ಲೇ ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − three =
Remember me
