ನವದೆಹಲಿ:ಮುಂಬರುವ ಲೋಕಸಭೆ ಚುನಾವಣೆಗೆ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಜೊತೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗಿದೆ.
ಇದನ್ನೂ ಓದಿ:ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!
ಸೋಮವಾರ (ಫೆ.18) ರಂದು ಪ್ರಕಟವಾದ ಸೀಟು ಹಂಚಿಕೆ ಒಪ್ಪಂದದ ಪ್ರಕಾರ ಬಿಹಾರದಲ್ಲಿ ಈ ಹಿಂದೆ ಮೈತ್ರಿಕೂಟದಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಬಿಹಾರದ ಎನ್‌ಡಿಎ ಮೈತ್ರಿಕೂಟದ ಸದಸ್ಯರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಸೀಟು ಹಂಚಿಕೆ ಸುದ್ದಿಯನ್ನು ತಿಳಿಸಿದರು.
ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಐದು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನ್ ಅವಾಮ್ ಮೋರ್ಚಾ ಮತ್ತು ಉಪೇಂದ್ರ ಕುಶ್ವಾಹಾ ಅವರ ಆರ್‌ಎಲ್‌ಎಂ ತಲಾ ಒಂದು ಸ್ಥಾನದಲ್ಲಿ ಕಣಕ್ಕಿಳಿಯಲಿದೆ.
ಲೋಕಸಭೆ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಬಿಹಾರದಲ್ಲಿ ಏಪ್ರಿಲ್ 19, ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 14 =
Remember me
