ನವದೆಹಲಿ:ಎನ್​​ಡಿಎ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ದ್ರೌಪದಿ ಮರ್ಮು ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ಘೋಷಣೆ ಬಳಿಕ ದೆಹಲಿ ಆಗಮಿಸಿದ ದ್ರೌಪದಿ ಮರ್ಮು ಅವರು, ಶುಕ್ರವಾರ ತಮ್ಮ ನಾಮಪತ್ರವನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಅವರಿಗೆ ಮೋದಿ ಮೊದಲ ಸೂಚಕರಾಗಿ ಸಹಿ ಮಾಡುವ ಸಾಧ್ಯತೆ ಇದೆ.
ಇಂದು ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ. ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನ ಅತ್ಯುತ್ತಮವಾಗಿದೆ ಎಂದು ಭೇಟಿ ಬಳಿಕ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.
ಅಲ್ಲದೇ ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮರ್ಮು ಅವರ ಉಮೇದುವಾರಿಕೆಯ ಬಗ್ಗೆ ದೇಶಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.ಪ್ರಧಾನಿ ಭೇಟಿ ಬಳಿಕ ದ್ರೌಪದಿ ಮರ್ಮು ಅವರು ಗೃಹ ಸಚಿವ ಅಮಿತ್​ ಶಾ ಅವರನ್ನೂ ಭೇಟಿ ಮಾಡಿದರು.(ಏಜೆನ್ಸೀಸ್​)
ತಮಿಳುನಾಡಿನಿಂದ ಅಕ್ರಮ ಒಂಟೆ ಸಾಗಾಣಿಕೆ ಕುರಿತು ಟ್ವಿಟ್ಟರ್​ ದೂರಿನಲ್ಲೆ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seven =
Remember me
