ನವದೆಹಲಿ:ದೇಶಾದ್ಯಂತ ಇದುವರೆಗೆ 10 ಕೋಟಿಗೂ ಅಧಿಕ ಮಂದಿಗೆ ಕರೊನಾ ಪರೀಕ್ಷೆ ಮಾಡಲಾಗಿದೆ. ಸತತ ಎರಡು ದಿನಗಳಿಂದ ಕೋವಿಡ್ 19 ಟೆಸ್ಟ್ ಪ್ರಮಾಣ 14 ಲಕ್ಷಕ್ಕೂ ಹೆಚ್ಚಾಗುತ್ತಿದೆ. ಸೆಪ್ಟೆಂಬರ್ 8 ರಂದು ಪರೀಕ್ಷೆಗೆ ಒಳಗಾದವರ ಸಂಖ್ಯೆ 5 ಕೋಟಿ ದಾಟಿತ್ತು. ಅದಾದ ನಂತರ ಕೇವಲ 45 ದಿನಗಳಲ್ಲಿ 5 ಕೋಟಿಗೂ ಅಧಿಕ ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ‘
ಗುಣಮುಖ ಪ್ರಮಾಣ ಶೇ. 89.5ಕ್ಕೂ ಹೆಚ್ಚಾಗಿದ್ದು, ಮರಣ ಪ್ರಮಾಣ ಶೇ. 1.5ಕ್ಕಿಂತ ಕಡಿಮೆಯಾಗಿದೆ. ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕರೊನಾ ಸೋಂಕಿತರ ಸಂಖ್ಯೆಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕಿಂತ ಕಡಿಮೆಯಾಗಿದೆ.
ಇದನ್ನೂ ಓದಿ:ಮಾಸ್ಕ್ ಧರಿಸದವರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳ ತಂಡ ರಚಿಸಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಗುರುವಾರ 74 ಸಾವಿರ ಜನರು ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 69 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6.95 ಲಕ್ಷಕ್ಕೆ ಇಳಿದಿದೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 77.61 ಲಕ್ಷಕ್ಕೂ ಹೆಚ್ಚಾಗಿದೆ. ಮೃತರ ಸಂಖ್ಯೆ 1.17 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. (ಏಜೆನ್ಸೀಸ್)
ಈರುಳ್ಳಿ ಬಫರ್ ಸ್ಟಾಕ್ ತಗೊಳ್ಳಿ, ದಾಸ್ತಾನಿಗೂ ಮಿತಿ ಇರಲಿ ಎಂದ ಕೇಂದ್ರ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 19 =
Remember me
