ಉತ್ತರಕನ್ನಡ: ಒಲಿಂಪಿಕ್ಸ್​​ನಲ್ಲಿ ಚಿನ್ನ ಗೆದ್ದು ಭಾರತೀಯರ ಹೆಮ್ಮೆಯ ಕ್ರೀಡಾಳು ಎನಿಸಿಕೊಂಡ ನೀರಜ್ ಚೋಪ್ರಾ ಇಂದು ತನ್ನ ಗುರು, ಉತ್ತರಕನ್ನಡ ಜಿಲ್ಲೆ ಶಿರಸಿಯವರಾದ ಕಾಶಿನಾಥ್​ ನಾಯ್ಕ್ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಒಲಿಂಪಿಕ್ಸ್​ನಲ್ಲಿ ಜಾವೆಲಿನ್​ ಥ್ರೋನಲ್ಲಿ ಚಿನ್ನದ ಪದಕ ಗಳಿಸಿದ್ದ ನೀರಜ್​ ಚೋಪ್ರಾ, 2015ರಿಂದ ಸುಮಾರು ಮೂರು ವರ್ಷಗಳ ಕಾಲ ಪಟಿಯಾಲಾದಲ್ಲಿ ಕಾಶಿನಾಥ್​ ನಾಯ್ಕ್​ ಅವರಿಂದ ಜಾವೆಲಿನ್​ ಥ್ರೋ ತರಬೇತಿ ಪಡೆದಿದ್ದರು.
ಇಂದು ಪುಣೆಯ ಕೋರೆಗಾಂವ್​ನಲ್ಲಿರುವ ಕಾಶಿನಾಥ್ ನಾಯ್ಕ್ ಅವರ ಮನೆಗೆ ತೆರಳಿದ ನೀರಜ್ ಚೋಪ್ರಾ ಗುರುವಂದನೆ ಸಲ್ಲಿಸಿದ್ದಾರೆ. ಈ ವೇಳೆ ಕಾಶಿನಾಥ್ ನಾಯ್ಕ್ ಅವರ ಪತ್ನಿ ಚೈತ್ರಾ ಅವರು ಆರತಿ ಬೆಳಗಿ ಮನೆಗೆ ಸ್ವಾಗತಿಸಿದರು. ಸುಮಾರು ಒಂದು ಗಂಟೆಗಳ ಕಾಲ ಗುರು-ಶಿಷ್ಯರು ಒಲಿಪಿಂಕ್ಸ್​ ಕ್ರೀಡಾಕೂಟದ ಬಗ್ಗೆ ಮಾತುಕತೆ ನಡೆಸಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − four =
Remember me
