ನವದೆಹಲಿ:ದೇಶಾದ್ಯಂತ ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ (ನೀಟ್) ಮತ್ತು ಜೆಇಇ ಪ್ರವೇಶ ಪರೀಕ್ಷೆಗಳನ್ನು ಮೇ ಕೊನೆಯ ವಾರಕ್ಕೆ ಮುಂದೂಡಿರುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಜ್ಞಾನಪನಾಪತ್ರ ಹೊರಡಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಪರೀಕ್ಷೆಗಳನ್ನು ಮರುನಿಗದಿಗೊಳಿಸುವ ಬಗ್ಗೆ ನಿರ್ಧರಿಸುವುದಾಗಿ ಹೇಳಿದೆ.
ಶೈಕ್ಷಣಿಕ ವೇಳಾಪಟ್ಟಿಯ ಮಹತ್ವದ ಬಗ್ಗೆ ನಮಗೆ ಅರಿವಿದೆ. ಆದರೆ, ವಿದ್ಯಾರ್ಥಿಗಳು ಸೇರಿ ದೇಶದ ಪ್ರತಿಯೊಬ್ಬ ನಾಗರಿಕನ ಆರೋಗ್ಯ ನಮಗೆ ತುಂಬಾ ಮುಖ್ಯವಾಗಿದೆ ಎಂದು ಎನ್‌ಟಿಎ ಡೈರೆಕ್ಟರ್ ಜನರಲ್ ವಿನೀತ್ ಜೋಷಿ ಹೇಳಿದ್ದಾರೆ.ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಲಾಕ್‌ಡೌನ್‌ನಿಂದಾಗಿ ಸಿಕ್ಕಿರುವ ಸಮಯವನ್ನು ಪರೀಕ್ಷೆಗೆ ಸಜ್ಜುಗೊಳ್ಳಲು ಮಕ್ಕಳಿಗೆ ಪಾಲಕರು ನೆರವಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಎನ್‌ಟಿಎ ಸದ್ಯ ನೀಟ್ ಮತ್ತು ಜೆಇಇ ಪ್ರವೇಶಪರೀಕ್ಷೆಗಳನ್ನು ಮುಂದೂಡಿದೆ. ಆದರೆ, ತಾನು ಆಯೋಜಿಸುವ ಇನ್ನಿತರ ಪರೀಕ್ಷೆಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − four =
Remember me
