ನವದೆಹಲಿ:ಯುಜಿಸಿ-ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಏಜನ್ಸಿಯ (NTA) ಮುಖ್ಯಸ್ಥ ಸುಭೋದ್​ ಕುಮಾರ್​ ಸಿಂಗ್​ ಅವರನ್ನು ಸ್ಥಾನದಿಂದ ತೆಗೆದು ಹಾಕಿದೆ. ಅವರ ಸ್ಥಾನಕ್ಕೆ ಕರ್ನಾಟಕ ಮೂಲದ ಮಾಜಿ IAS ಅಧಿಕಾರಿ ಪ್ರದೀಪ್​ ಸಿಂಗ್​ ಕರೋಲಾ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಬಿಹಾರದಲ್ಲಿ ನಡೆದಿದ್ದ ಪೇಪ್​ ಲೀಕ್​ ಹಗರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 23) ನಡೆಯಬೇಕಿದ್ದ ನೀಟ್​ ಪರೀಕ್ಷೆಯನ್ನು ಮುಂದೂಡಿದೆ. ಈ ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು NTA ತಿಳಿಸಿದೆ.
ಇದನ್ನೂ ಓದಿ:ನಿನ್ನನ್ನು ನಾಯಕನನ್ನಾಗಿ ಮಾಡಿದ ಐನ್​ಸ್ಟೈನ್​ನನ್ನು ನೋಡುವ ಆಸೆಯಾಗಿದೆ; ಬಾಬರ್​ ವಿರುದ್ಧ ಮಾಜಿ ಕ್ರಿಕೆಟಿಗ ವಾಗ್ದಾಳಿ
ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​, ಪ್ರಕರಣವನ್ನು ಉನ್ನತಮಟ್ಟದ ಸಮಿತಿ ತನಿಖೆ ಮಾಡುತ್ತಿದ್ದು, ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಲಿದೆ. CSIR-UGC NET ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿಲ್ಲ. ಲಾಜಿಸ್ಟಿಕ್​ ಸಮಸ್ಯೆಯಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆಗಳಲ್ಲಿ ಯಾವುದೇ ತಪ್ಪುಗಳಾಗದಂತೆ ನೋಡಿಕೊಳ್ಳುವುದು, ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿಡುವುದು ನಮ್ಮ ಬದ್ಧತೆಯಾಗಿದೆ. ನಮ್ಮ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಸಮಿತಿಯ ಸಲಹೆಗಳನ್ನು ಆಧರಿಸಿ, ಡೇಟಾ ಭದ್ರತೆ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಹೊಸ ಸುಧಾರಣೆಗಳನ್ನು ತರಲಾಗುವುದು, ನಮಗೆ ವಿದ್ಯಾರ್ಥಿಗಳ ಹಿತಾಸಕ್ತಿಯೇ ಮುಖ್ಯ ಎಂದು ಹೇಳಿದ್ದಾರೆ.
ಈ ಉನ್ನತ ಮಟ್ಟದ ಸಮಿತಿಯಲ್ಲಿ 7 ಮಂದಿ ಸದಸ್ಯರಿದ್ದಾರೆ. ಇದರ ನೇತೃತ್ವವನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ. ರಾಧಾಕೃಷ್ಣನ್​ ವಹಿಸಲಿದ್ದಾರೆ. ಈ ಸಮಿತಿಯು ಮುಂದಿನ ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಲಿದೆ. ಎನ್​ಟಿಎ ನಡೆಸುವ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಮತ್ತು ಯಾವುದೇ ನ್ಯೂನತೆಗಳು ಇರದಂತೆ ನೋಡಿಕೊಳ್ಳಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಆ ವರದಿಯ ಆಧಾರದ ಮೇಲೆ ಡೇಟಾ ಸುರಕ್ಷತೆ, ಪ್ರೋಟೋಕಾಲ್​ಗಳು ಮತ್ತು ಪರೀಕ್ಷೆಯ ಕಾರ್ಯನಿರ್ವಹಣೆ ಮತ್ತು ಎನ್​ಟಿಎಯನ್ನು ಉತ್ತಮವಾಗಿ ಸುಧಾರಿಸಲು ನಮಗೆ ಸಾಧ್ಯವಾಗುತ್ತದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − ten =
Remember me
