ನವದೆಹಲಿ:ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದ ನೀಟ್ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಎಕ್ಸಾಮ್)2024ರ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ 1563 ವಿದ್ಯಾರ್ಥಿಗಳ ಗ್ರೇಸ್‌ ಮಾರ್ಕ್‌ಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಇದನ್ನು ಓದಿ:ಚುನಾವಣೆ ಒಂದು ಸ್ಪರ್ಧೆಯೇ ಹೊರತು ಯುದ್ಧವಲ್ಲ ಎಂದಿದ್ದೇಕೆ ಆರ್​ಎಸ್​​ಎಸ್​​ ಮುಖ್ಯಸ್ಥ ಮೋಹನ್ ಭಾಗವತ್
ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆಗೆ ಹಾಜರಾಗುವ ಆಯ್ಕೆಯನ್ನು ನೀಡಲಾಗುವುದು ಎಂಬ ಕೇಂದ್ರದ ಶಿಫಾರಸನ್ನು ಸುಪ್ರೀಂಕೋರ್ಟ್​​ ಅಂಗೀಕರಿಸಿದೆ. NEET ಫಲಿತಾಂಶದ ನಂತರ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠವು ವಿಚಾರಣೆ ನಡೆಸುತ್ತಿದೆ. ಪ್ರವೇಶಕ್ಕಾಗಿ ನಡೆಯುವ ಕೌನ್ಸೆಲಿಂಗ್ ಪ್ರಕ್ರಿಯೆ ನಿಗದಿತ ರೀತಿಯಲ್ಲಿ ಮುಂದುವರಿಯುತ್ತದೆ ಮತ್ತು ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಪೀಠವು ತಿಳಿಸಿದೆ. .
ಕೇಂದ್ರ ಮತ್ತು ಎನ್‌ಟಿಎ ಪರ ವಕೀಲರು ಗ್ರೇಸ್ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಆಯ್ಕೆಯನ್ನು ನೀಡಲಾಗುವುದು.ಜುಲೈ 6ರಿಂದ ಪ್ರಾರಂಭವಾಗುವ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅನುಕೂಲವಾಗುವಂತೆ ಮರುಪರೀಕ್ಷೆಯ ಫಲಿತಾಂಶಗಳನ್ನು ಜೂನ್ 30ರ ಮೊದಲು ಪ್ರಕಟಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. ಈ ಮರುಪರೀಕ್ಷೆಗೆ ಹಾಜರಾಗಲು ಇಚ್ಛಿಸದವರಿಗೆ ಗ್ರೇಸ್ ಮಾರ್ಕ್ ಇಲ್ಲದ ಅವರು ಪಡೆದಿರುವ ಮೂಲ ಸ್ಕೋರ್‌ಕಾರ್ಡ್‌ಗಳನ್ನು ನೀಡಲಾಗುತ್ತದೆ ಎಂದು ಹೇಳಿದರು. NEET-UG ಪರೀಕ್ಷೆಯನ್ನು ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುತ್ತದೆ. (ಏಜೆನ್ಸೀಸ್​​)
ನೆಲದ ಮೇಲೆ ಮಲಗುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ತಿಳಿದುಕೊಂಡರೆ ನೀವು ಇದನ್ನು ರೂಢಿಸಿಕೊಳ್ಳುವಿರಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
