ನವದೆಹಲಿ:ನೀಟ್, ಪಿಜಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಇದನ್ನೂ ಓದಿ:‘ಅವರು ಶಾಶ್ವತವಾಗಿ ಬೇರೆಯಾಗ್ತಾರೆ’: ನಾಗಚೈತನ್ಯ- ಸೋಭಿತಾ ಭವಿಷ್ಯ ನುಡಿದ ವೇಣುಸ್ವಾಮಿ!
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ. ನ್ಯಾಷನಲ್​ ಬೋರ್ಡ್​ ಆಫ್​ ಎಕ್ಸಾಮಿನೇಷನ್ಸ್​ ಇನ್​ ಮೆಡಿಕಲ್​ ಸೈನ್ಸಸ್​(ಎನ್​ಬಿಇಎಂಎಸ್​) ನೀಟ್​, ಪಿಜಿ ಪರೀಕ್ಷೆಯನ್ನು 2024ರ ಆ.11 ರಂದು ಎರಡು ಪಾಳಿಗಳಲ್ಲಿ ನಡೆಸುತ್ತದೆ. 2.28 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದೆ.
ಗುರುವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಮುಂದೆ ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿ ಸಲ್ಲಿಸಿದ ಮನವಿಯನ್ನು ವಕೀಲ ಅನಸ್ ತನ್ವೀರ್ ಪ್ರಸ್ತಾಪಿಸಿದ ನಂತರ ಸುಪ್ರೀಂ ಕೋರ್ಟ್ ಮುಂದೂಡಿಕೆ ಮನವಿಯನ್ನು ಆಲಿಸಲು ಒಪ್ಪಿಕೊಂಡಿತು.
ಜುಲೈ 31 ರಂದು ಪರೀಕ್ಷೆ ನಿಗದಿಪಡಿಸಿದ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರಿಂದ ಮತ್ತು ನಿರ್ದಿಷ್ಟ ಪರೀಕ್ಷಾ ಕೇಂದ್ರಗಳು ಯಾವುವೆಂದು ಆ. 8 ರಂದು ಬಹಿರಂಗಗೊಂಡಿರುವುದರಿಂದ ಕಡಿಮೆ ಸಮಯದಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ಸಾಧ್ಯವಾಗುವುದಿಲ್ಲ. ಹೀಗಾಗಿ ನೀಟ್​,ಪಿಜಿ ಪರೀಕ್ಷೆ ಮುಂದೂಡಬೇಕು ಎಂದು ಅರ್ಜಿದಾರರು ಗಮನಸೆಳೆದಿದ್ದರು.
ನೀಟ್ ಪಿಜಿ 2024 ಪರೀಕ್ಷೆಯನ್ನು ಈ ಹಿಂದೆ ಜೂ.23ರಂದು ನಿಗದಿಪಡಿಸಲಾಗಿತ್ತು. ಆದರೆ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪರೀಕ್ಷೆಯನ್ನು ಮುಂದೂಡಿತ್ತು.
ವಾಕ್ಸಮರಕ್ಕಿಳಿದ ಮೆಗಾ​- ಅಲ್ಲು ಫ್ಯಾನ್ಸ್​..ಪವನ್​ ಎಂಟ್ರಿ! ಮುಂದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
