ನವದೆಹಲಿ:ರಾಷ್ಟ್ರ ರಾಜಧಾನಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಕ್ಯಾಬಿನೆಟ್ ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ಆ.14ರಿಂದ ಅಧಿಕೃತವಾಗಿ ಹೆಸರು ಬದಲಾಗಿದೆ. ಪ್ರಜಾಪ್ರಭುತ್ವೀಕರಣ ಮತ್ತು ವೈವಿಧಿ್ಯಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಜೂನ್ 17ರಂದು ನಡೆದ ವಿಶೇಷ ಸಭೆಯಲ್ಲಿ ಈ ಸಂಸ್ಥೆಯ ಹೆಸರನ್ನು ಬದಲಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.
ತೀನ್ ಮೂರ್ತಿ ಭವನವನ್ನು ಬ್ರಿಟಿಷರ ಆಳ್ವಿಕೆ ಸಂದರ್ಭದಲ್ಲಿ ನಿರ್ವಿುಸಲಾಗಿದ್ದು, ದೇಶ ಸ್ವಾತಂತ್ರ್ಯಾನಂತರ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ನೆಹರೂ ಅವರು ಈ ನಿವಾಸದಲ್ಲಿ 16 ವರ್ಷಗಳಿಗೂ ಹೆಚ್ಚು ಕಾಲ ವಾಸವಾಗಿದ್ದರು. ನೆಹರೂ ಅವರ 75ನೇ ಜನ್ಮದಿನದ ನೆನಪಿಗಾಗಿ 1964ರಲ್ಲಿ ಈ ಭವನದಲ್ಲಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸ್ಥಾಪಿಸಲಾಗಿತ್ತು.
‘ದಿಗ್ವಿಜಯ ನ್ಯೂಸ್’ ಇನ್ನು ‘ರಿಪಬ್ಲಿಕ್ ಕನ್ನಡ’; ರಾಷ್ಟ್ರೀಯತೆ ನಮ್ಮ ವಿಚಾರಧಾರೆ ಎಂದ ಅರ್ನಬ್ ಗೋಸ್ವಾಮಿ

ನಿಮ್ಮ ಬಳಿ 2 ಸಾವಿರ ರೂಪಾಯಿ ನೋಟು ಇನ್ನೂ ಇದೆಯಾ?; ಹಾಗಿದ್ದರೆ ಹುಷಾರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
