ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರ ನಿಧನಕ್ಕೆ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಲ್ಡೀವ್ಸ್​ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರ ನಿಧನದ ಸುದ್ದಿ ಕೇಳಿ ತುಂಬ ದುಃಖವಾಯಿತು. ಅವರ ಕುಟುಂಬದವರು, ಭಾರತದ ಜನರು, ಸರ್ಕಾರಕ್ಕೆ ನಮ್ಮ ಸಾಂತ್ವನಗಳು.
ಇಂದು ನೇಪಾಳದ ಅತ್ಯುತ್ತಮ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ. ಪ್ರಣಬ್​ ಅವರು ಭಾರತ-ನೇಪಾಳ ನಡುವಿನ ಸಂಬಂಧ ಬಲಪಡಿಸುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು. ತಾವು ನಿಭಾಯಿಸಿದ ವಿವಿಧ ಹುದ್ದೆಗಳ ಮೂಲಕ ಎರಡೂ ದೇಶಗಳ ನಡುವಿನ ಸ್ನೇಹವನ್ನು ಮತ್ತಷ್ಟು ಉತ್ತಮಗೊಳಿಸಿದ್ದರು ಎಂದು ಕೆ.ಪಿ.ಶರ್ಮಾ ತಿಳಿಸಿದ್ದಾರೆ.ಇದನ್ನೂ ಓದಿ:‘ಪ್ರಣಬ್​ ದಾ ಜನಮಾನಸದಲ್ಲಿ ಸದಾ ಶಾಶ್ವತ…’: ಸಿಎಂ ಯಡಿಯೂರಪ್ಪ, ಸಂಸದರು..ಸಚಿವರಿಂದ ಸಂತಾಪ
ಹಾಗೇ ಮಾಲ್ಡೀವ್ಸ್​ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಟ್ವೀಟ್ ಮಾಡಿ, ಪ್ರಣಬ್​ ಅವರ ಸಾವಿನಿಂದ ಬರೀ ಭಾರತಕ್ಕಷ್ಟೇ ಅಲ್ಲ..ಇಡೀ ದಕ್ಷಿಣ ಏಷ್ಯಾಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸೇವಾ ಸಾಮರ್ಥ್ಯ ಶ್ರೇಷ್ಠವಾದದ್ದು ಎಂದಿದ್ದಾರೆ.(ಏಜೆನ್ಸೀಸ್​)
ಪ್ರಣಬ್​ ನಿಧನಕ್ಕೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × two =
Remember me
