ಜೈಪುರ :ಪ್ರಮುಖ ನರರೋಗತಜ್ಞ ಮತ್ತು ಪದ್ಮಶ್ರೀ ಪುರಸ್ಕೃತರಾಗಿದ್ದ ಡಾ.ಅಶೋಕ್ ಪನಗರಿಯಾ ಅವರು ಕೋವಿಡ್ ನಂತರದ ವೈದ್ಯಕೀಯ ಸಮಸ್ಯೆಗಳಿಂದಾಗಿ ಇಂದು ನಿಧನ ಹೊಂದಿದ್ದಾರೆ. 71 ವರ್ಷ ವಯಸ್ಸಾಗಿದ್ದ ಡಾ. ಪನಗರಿಯಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ ಬೆಂಬಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಪನಗರಿಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳು ಬರುವ ತಲೆಮಾರುಗಳ ವೈದ್ಯರು ಮತ್ತು ಸಂಶೋಧಕರಿಗೆ ಉಪಯುಕ್ತವಾದುದು ಎಂದಿದ್ದಾರೆ.
ಕರೊನಾ ಸಾಂಕ್ರಾಮಿಕದ ಸಮಯದಲ್ಲಿ ಡಾ. ಪನಗರಿಯ ಅವರು ರಾಜಸ್ಥಾನದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದು, ವೈದ್ಯಕೀಯ ತಜ್ಞರಾಗಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಮರಿಸಿದ್ದಾರೆ. ಇಂಧನ ಸಚಿವ ಬಿ.ಡಿ.ಕಲ್ಲಾ, ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಇತರ ನಾಯಕರು ಸಂತಾಪ ಸೂಚಿಸಿದ್ದಾರೆ.
ಮದ್ಯ ಸೇವಿಸಲು ಹಣ ಕೊಡಲಿಲ್ಲ ಎಂದು ಬಡ ಹೆಂಡತಿಯ ಹತ್ಯೆ

ಅಕ್ರಮ ವಾಸದೊಂದಿಗೆ ಕಿಡ್ನಿ ಮಾರಾಟದ ಸೋಗಲ್ಲಿ ವಂಚನೆ : ನೈಜೀರಿಯಾ ಪ್ರಜೆ ಪೊಲೀಸರ ಬಲೆಗೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + twenty =
Remember me
