ನವದೆಹಲಿ:ದೇಶದ 8 ಹೈಕೋರ್ಟ್​​ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕಾಗಿ ಸುಪ್ರೀಂ ಕೋರ್ಟ್​ ಕೊಲೆಜಿಯಮ್​ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅಲಹಾಬಾದ್‌ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಅವರ ಹೆಸರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ(ಸಿಜೆ) ಹುದ್ದೆಗೆ ಶಿಫಾರಸು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ದೇಶದ 14 ಹೈಕೋರ್ಟ್​ಗಳ ನ್ಯಾಯಮೂರ್ತಿಗಳ ದೊಡ್ಡ ಪ್ರಮಾಣದ ವರ್ಗಾವಣೆಗೆ ಶಿಫಾರಸು ಮಾಡಲಾಗಿದ್ದು, ಇದೇ ಮೊದಲ ಬಾರಿ ಒಮ್ಮೆಲೇ ಎಂಟು ಹೈಕೋರ್ಟ್‌ಗಳಿಗೆ ಹೊಸ ಸಿಜೆಗಳನ್ನು ಸೂಚಿಸಲಾಗಿದೆ. ಕರ್ನಾಟಕದ ಒಟ್ಟು ನಾಲ್ವರು ನ್ಯಾಯಮೂರ್ತಿಗಳ ಹೆಸರು ಕೊಲೆಜಿಯಂನ ಶಿಫಾರಸು ಪಟ್ಟಿಯಲ್ಲಿದೆ ಎನ್ನಲಾಗಿದೆ.
ಇದನ್ನೂ ಓದಿ:ದಾಖಲೆ ಲಸಿಕೀಕರಣ: ಒಂದೇ ದಿನದಲ್ಲಿ ಆಸ್ಟ್ರೇಲಿಯಾ ಜನಸಂಖ್ಯೆಗೆ ಸಮಾನ ಡೋಸ್​ಗಳು!
ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ ಅವರನ್ನು ತೆಲಂಗಾಣ ಹೈಕೋರ್ಟ್‌ ಸಿಜೆ ಆಗಿ, ಮತ್ತು ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರನ್ನು ಗುಜರಾತ್‌ ಹೈಕೋರ್ಟ್‌ ಸಿಜೆ ಆಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.
ಕೊಲ್ಕತ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್​ ಬಿಂಡಾಲ್​ ಅವರನ್ನು ಅಲಹಾಬಾದ್​ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾಗಿ ಹೆಸರಿಸಲಾಗಿದೆ. ಕೊಲ್ಕತ, ಆಂಧ್ರಪ್ರದೇಶ, ಮೇಘಾಲಯ, ಮಧ್ಯಪ್ರದೇಶ ಹೈಕೋರ್ಟ್​ಗಳಿಗೂ ನೂತನ ಮುಖ್ಯ ನ್ಯಾಯಮೂರ್ತಿಗಳು ಲಭಿಸಲಿದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್)
ನಟ ಸೋನು ಸೂದ್​​ಗೆ ಐಟಿ ಕಂಟಕ: 20 ಕೋಟಿ ರೂ. ತೆರಿಗೆ ವಂಚನೆ ಆರೋಪ

ರವಿ ಶಾಸ್ತ್ರಿ ನಂತರ ಹೆಡ್​ ಕೋಚ್​ ಯಾರು? ಸಂಭಾವ್ಯ ಪಟ್ಟಿಯಲ್ಲಿ ಈ ಇಬ್ಬರ ಹೆಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 7 =
Remember me
