ನವದೆಹಲಿ:ದೇಶದಾದ್ಯಂತ ಸೋಮವಾರ(ಜುಲೈ 1) ರಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲಾಗಿದ್ದು, ದೆಹಲಿಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ:ಜಲಪಾತ ನೋಡಲು ಹೋಗಿ ಪ್ರವಾಹದಲ್ಲಿ ಕೊಚ್ಚಿಹೋದ ಐವರು!
ದೆಹಲಿಯಲ್ಲಿ ಹೊಸ ಕಾನೂನಿನಡಿಯಲ್ಲಿ ಮೊದಲ ಪ್ರಕರಣ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪೊಲೀಸರು ಹೊಸ ಕಾಯ್ದೆ ಬಿಎನ್‌ಎಸ್ ಸೆಕ್ಷನ್ 285 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನವದೆಹಲಿ ರೈಲು ನಿಲ್ದಾಣದ ಫುಟ್‌ಓವರ್ ಸೇತುವೆಯ ಕೆಳಗೆ ಮಾರಾಟ ಮಾಡುವ ಮೂಲಕ ಸಂಚಾರಕ್ಕೆ ಅಡ್ಡಿಪಡಿಸಿದ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ದೆಹಲಿ ಪೊಲೀಸರ ಎಫ್‌ಐಆರ್ ಪ್ರಕಾರ, ನವದೆಹಲಿ ರೈಲು ನಿಲ್ದಾಣದ ಫುಟ್‌ಓವರ್ ಸೇತುವೆಯ ಕೆಳಗೆ ಸರಕು ಮಾರಾಟ ಮಾಡುತ್ತಿದ್ದ ಆರೋಪಿ ಬಿಹಾರದ ನಿವಾಸಿ. ಆತ ಬಿಹಾರದ ಬರ್ಹ್ ಭಕ್ತಿಯಾರಪುರದ ನಿವಾಸಿಯಾಗಿದ್ದಾನೆ. ಆರೋಪಿಯ ಹೆಸರು ಪಂಕಜ್ ಕುಮಾರ್ ಎಂದು ಪೊಲೀಸರು ತಿಳಿಸಿದ್ದಾರೆ.
ಆತ ನಿಲ್ದಾಣದ ಬಳಿ ಬೀದಿ ವ್ಯಾಪಾರ ಮಾಡಿಕೊಂಡಿದ್ದು, ಬೀಡಿ, ಸಿಗರೇಟ್ ಸೇರಿದಂತೆ ಹಲವು ವಸ್ತುಗಳನ್ನು ಮಾರಾಟ ಮಾಡುತ್ತಿದ್ದ. ಇದರಿಂದ ಪ್ರಯಾಣಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಗಾಡಿ ತೆಗೆಯಲು ಕೇಳಿದಾಗ ಆತ ನಿರಾಕರಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಲೋಕಸಭೆ ಅಧಿವೇಶನ..ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 3 =
Remember me
