ನವದೆಹಲಿ:ಮತ್ತೊಮ್ಮೆ ದೆಹಲಿ ಮುಖ್ಯಮಂತ್ರಿಯಾಗುತ್ತಿರುವ ಆಪ್​ನ ಅರವಿಂದ ಕೇಜ್ರಿವಾಲ್​ ಅವರು ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಕೇಜ್ರಿವಾಲ್ ಅವರ ಮೂರನೇ ಪ್ರಮಾಣವಚನ ಸಮಾರಂಭದಲ್ಲಿ ಯಾವುದೇ ಮುಖ್ಯಮಂತ್ರಿ ಅಥವಾ ಇತರ ರಾಜ್ಯಗಳ ರಾಜಕೀಯ ಮುಖಂಡರನ್ನು ಆಹ್ವಾನಿಸುವುದಿಲ್ಲ ಎಂದು ಆಪ್​ ಹೇಳಿಕೊಂಡಿತ್ತು.
ದೆಹಲಿಯ ಹೃದಯ ಭಾಗದಲ್ಲಿರುವ ರಾಮಲೀಲಾ ಮೈದಾನದಲ್ಲಿ ಭಾನುವಾರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ಹಿಂದೆ ಬಂದ ಚುನಾವಣೆ ಫಲಿತಾಂಶದಲ್ಲಿ ಆಪ್​ ಪಕ್ಷವು ದೆಹಲಿಯ 70 ಸ್ಥಾನಗಳಲ್ಲಿ 62 ಸ್ಥಾನ ತನ್ನದಾಗಿಸಿಕೊಂಡಿತ್ತು.
ಪ್ರಮಾಣ ವಚನ ಸಮಾರಂಭಕ್ಕೆ ದೆಹಲಿಯಲ್ಲಿರುವ ಪ್ರತಿಯೊಬ್ಬರಿಗೂ ಆಹ್ವಾನವಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದರು. ಫಲಿತಾಂಶ ಪ್ರಕಟವಾದ ದಿನ ಅರವಿಂದ ಕೇಜ್ರಿವಾಲ್​ ಅವರು “ದೆಹಲಿ ನಿವಾಸಿಗಳೇ ನೀವು ಅದ್ಭುತವನ್ನೇ ಮಾಡಿದ್ದೀರಿ, ಐ ಲವ್​ ಯು” ಎಂದಿದ್ದರು.
ಅರವಿಂದ ಕೇಜ್ರಿವಾಲ್​ ಅವರು ತಮ್ಮ ಹಳೇ ತಂಡದೊಂದಿಗೆ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ಮೂಲಗಳ ಪ್ರಕಾರ ಯಾವ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದಿಲ್ಲ. ಆದರೆ, ಹೊಸ ಮುಖಗಳಾದ ಆತಿಷ್​ ಮತ್ತು ರಾಘವ್​ ಚಡ್ಡಾ ಅವರಿಗೆ ಅವಕಾಶ ಸಿಕ್ಕರೂ ಆಶ್ಚರ್ಯವಿಲ್ಲ ಎಂಬುದು ಸದ್ಯ ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆ.(ಏಜೆನ್ಸೀಸ್​)
Delhi: Preparations underway for swearing-in ceremony of Chief Minister designate Arvind Kejriwal at Ramlila Ground. He will take oath as CM for the third time on February 16.pic.twitter.com/qaoR5xgJME
— ANI (@ANI)February 14, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − thirteen =
Remember me
