ನವದೆಹಲಿ:2020ರ ಗಣರಾಜ್ಯೋತ್ಸವದ ಅಂಗವಾಗಿ ಜೀವನ​ ರಕ್ಷಾ ಪದಕವನ್ನು 54 ಮಂದಿಗೆ ಪ್ರದಾನ ಮಾಡಲು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಅದರಂತೆ 7 ಮಂದಿಗೆ ಸರ್ವೋತ್ತಮ ಜೀವನ ರಕ್ಷಾ ಪದಕ, 8 ಉತ್ತಮ ಜೀವನ ರಕ್ಷಾ ಪದಕ ಮತ್ತು ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 39 ಮಂದಿಗೆ ಜೀವನ​ ರಕ್ಷಾ ಪದಕ ಪ್ರದಾನ ಮಾಡಲಾಗುತ್ತದೆ.
ಕರ್ನಾಟಕದ ಸಿದ್ದಪ್ಪ ಕೆಂಪಣ್ಣ ಹೊಸಟ್ಟಿ ಮತ್ತು ಶಿವಾನಂದ ದಶರಥ ಹೊಸಟ್ಟಿ ಎಂಬ ಬಾಲಕರಿಬ್ಬರಿಗೆ ಈ ಬಾರಿ ಜೀವನ​ ರಕ್ಷಾ ಪದಕ ದೊರೆಯಲಿದೆ.
ವ್ಯಕ್ತಿಯ ಜೀವ ಉಳಿಸುವಲ್ಲಿ ಮಾಡಿರುವ ಪ್ರಶಂಸನೀಯ ಕಾರ್ಯಕ್ಕಾಗಿ ಜೀವನ ರಕ್ಷ ಪದಕ ಸರಣಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಸರ್ವೊತ್ತಮ ಜೀವನ ರಕ್ಷಾ ಪದಕ, ಉತ್ತಮ ಜೀವ ರಕ್ಷಾ ಪದಕ ಮತ್ತು ಜೀವ ರಕ್ಷಾ ಪದಕ ಎಂದು ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಎಲ್ಲ ವರ್ಗದ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿದ್ದಾರೆ. ಅಲ್ಲದೆ ಪ್ರಶಸ್ತಿಯನ್ನು ಮರಣೋತ್ತರವಾಗಿ ಕೂಡ ಪ್ರದಾನ ಮಾಡಲಾಗುತ್ತದೆ.
ಪದಕ, ಗೃಹ ಸಚಿವರು ಸಹಿ ಮಾಡಿದ ಪ್ರಮಾಣ ಪತ್ರ ಮತ್ತು ಗೌರವ ಧನವನ್ನು ಪ್ರಶಸ್ತಿಗಳು ಒಳಗೊಂಡಿವೆ. ಪ್ರಶಸ್ತಿ ವಿಜೇತರಿಗೆ ಆಯಾ ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳ ಕಡೆಯಿಂದ ಪ್ರದಾನ ಕೊಡಮಾಡಲಾಗುತ್ತದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
