ನವದೆಹಲಿ:ತೆಲಂಗಾಣದ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎನ್​​ಕೌಂಟರ್​ ಮಾಡಿದ ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ಮತ್ತು ಮೃತಪಟ್ಟವರಿಗೆ ಪರಿಹಾರ ನೀಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ.
ಎನ್​ಕೌಂಟರ್​ನಲ್ಲಿ ಮೃತ ಪಟ್ಟವರ ಕುಟುಂಬಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ಅರ್ಜಿ ಸಲ್ಲಿಸಿದ ಕುಟುಂಬಗಳು ಮೂವರು ಸದಸ್ಯರಿರುವ ವಿಚಾರಣಾ ಆಯೋಗವನ್ನು ಸಂಪರ್ಕಿಸಲು ತಿಳಿಸಿತು.
ಆಯೋಗ ಎನ್​ಕೌಂಟರ್​ ಬಗ್ಗೆ ತನಿಖೆ ನಡೆಸುತ್ತಿದ್ದು ವರದಿ ಸಲ್ಲಿಸುವ ಮುನ್ನ ಸಂಪರ್ಕಿಸಿ. ನಿಮ್ಮ ಬಳಿ ಇರುವ ದಾಖಲೆಯನ್ನು ಆಯೋಗಕ್ಕೆ ನೀಡಿ ಎಂದು ತಿಳಿಸಿತು.
ಆಯೋಗ ವರದಿ ಸಲ್ಲಿಸಿದ ನಂತರ ಪರಿಹಾರದ ಬಗ್ಗೆ ಅರ್ಜಿ ಸಲ್ಲಿಸಿ. ಈ ಸ್ಥಿತಿಯಲ್ಲಿ ನಿಮ್ಮ ಅರ್ಜಿಯನ್ನು ಪರಿಗಣಿಸಲು ಬರುವಂತಿಲ್ಲ ಎಂದ ಪೀಠ, ಅರ್ಜಿ ಹಿಂಪಡೆಯಲು ಸೂಚಿಸಿತು.
ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಎನ್​ಕೌಂಟರ್​ನಲ್ಲಿ ಮೃತ ಪಟ್ಟ ನಾಲ್ಕು ಕುಟುಂಬಗಳ ಸದಸ್ಯರು 50 ಲಕ್ಷ ರೂಪಾಯಿ ಪರಿಹಾರ ನೀಡಲು ಮನವಿ ಮಾಡಿದ್ದರು. ನಮ್ಮ ಮಕ್ಕಳನ್ನು ಕಾನೂನು ಉಲ್ಲಂಘಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದರು.
ರಂಗಾರೆಡ್ಡಿ ಜಿಲ್ಲೆಯ ಶಾದ್‌ನಗರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 44ರ ಬಳಿಯ ಚತನ್‌ಪಲ್ಲಿ ಸೇತುವೆ ಬಳಿ ನಾಲ್ವರು ಆರೋಪಿಗಳು ಪಶುವೈದ್ಯೆಯ ಮೇಲೆ ಅತ್ಯಾಚಾರ ಮಾಡಿ, ಆಕೆಯ ದೇಹವನ್ನು ಸುಟ್ಟಿದ್ದರು. ಮೃತದೇಹ ನ.28ರಂದು ಪತ್ತೆಯಾಗಿತ್ತು. ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿಸೆಂಬರ್​ 6ರಂದು ಪೊಲೀಸರು ಎನ್​ಕೌಂಟರ್​ ಮಾಡಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
