ನವದೆಹಲಿ:ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಮಾಡುವ ಪ್ರಕ್ರಿಯೆ ವಿಳಂಬ ಆಗುತ್ತಿರುವ ಬೆನ್ನಲ್ಲೇ ಮತ್ತೊಮ್ಮೆ ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲಿ ಎಂಬ ಒತ್ತಾಯವೂ ಆ ಪಕ್ಷದ ಮುಖಂಡರಲ್ಲಿ ಹೆಚ್ಚಾಗಿದೆ. ಹಾಗೇ ರಾಹುಲ್​ ಗಾಂಧಿಯವರೂ ಅದನ್ನು ನಿರಾಕರಿಸುತ್ತಿದ್ದಾರೆ.
ಇದೀಗ ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಮಾಡುವ ಸಂಬಂಧ ಸಭೆಯನ್ನು ಕರೆಯಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಲು ಅರ್ಹತೆ ಇರುವವರ ಪಟ್ಟಿಯನ್ನು ಕಳಿಸಲು ಎಐಸಿಸಿ, ಎಲ್ಲ ರಾಜ್ಯಗಳ ಕಾಂಗ್ರೆಸ್ ಘಟಕಕ್ಕೆ ಸೂಚನೆ ನೀಡಿದೆ.
ಎಐಸಿಸಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಶೀಘ್ರವೇ ಸಭೆ ಕರೆಯಲಾಗುವುದು. ಸಭೆಯ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಿ, ಆದಷ್ಟು ಬೇಗ ಕಳಿಸಲಾಗುತ್ತದೆ ಎಂದು ಎಲ್ಲ ರಾಜ್ಯದ ಘಟಕಗಳಿಗೆ ಮಧುಸೂಧನ್​ ಮಿಸ್ತ್ರಿ ನೇತೃತ್ವದ ಕಾಂಗ್ರೆಸ್​ ಚುನಾವಣಾ ಪ್ರಾಧಿಕಾರ ಸಂದೇಶ ಕಳಿಸಿದೆ.
ಮುಂದಿನ ತಿಂಗಳು ಅಥವಾ 2021ರ ಪ್ರಾರಂಭದಲ್ಲಿ ಕಾಂಗ್ರೆಸ್​ನ ಈ ಸಭೆ ನಡೆಯಲಿದೆ. ರಾಹುಲ್ ಗಾಂಧಿಯವರನ್ನೇ ಮರಳಿ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. (ಏಜೆನ್ಸೀಸ್​)
ಮದ್ವೆಯಾಗಿ ವರ್ಷ ಕಳೆದಿಲ್ಲ ಮಾವನಿಂದಲೇ ಸೊಸೆ ಗರ್ಭಿಣಿ?: ಆ ಒಂದು ಮಾತಿಗೆ ಅತ್ತೆಯ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
