ನವದೆಹಲಿ:ಕರೊನಾ ಸೋಂಕು ತಗುಲಿರುವುದು ಖಚಿತಪಡಿಸಿಕೊಳ್ಳಬೇಕಾದರೆ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗುತ್ತದೆ. ಕರೊನಾ ಲಕ್ಷಣಗಳಾದ ಜ್ವರ, ತಲೆನೋವು ಇತ್ಯಾದಿ ಕಾಣಿಸಿಕೊಳ್ಳುವ ವ್ಯಕ್ತಿಗಳು ಒಂದೆಯಾದರೆ, ಯಾವುದೇ ಲಕ್ಷಣಗಳು ಇಲ್ಲದೆಯೇ ಆರಾಮಾಗಿ ಇರುವವರಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.
ಇದೇ ಕಾರಣಕ್ಕೆ ಕರೊನಾ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಸರ್ಕಾರಿ ಹಾಗೂ ಖಾಸಗಿ ಪ್ರಯೋಗಾಲಯಗಳು ಈ ಪರೀಕ್ಷೆಗಳನ್ನು ನಡೆಸುತ್ತಿವೆ. ಇಂಥ ಪರೀಕ್ಷೆಯಲ್ಲಿ ಭಾರತದ ಸರ್ಕಾರಿ ಲ್ಯಾಬ್‌ಗಳು ಕಳೆದ 24 ಗಂಟೆಗಳಲ್ಲಿ ಹೊಸ ದಾಖಲೆ ಬರೆದಿದೆ.
ಅದೇನೆಂದರೆ 4,42,031 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸುವ ಮೂಲಕ ಇಲ್ಲಿಯವರೆಗಿನ ದಾಖಲೆಯನ್ನು ಮುರಿಯಲಾಗಿದೆ. ಸರ್ಕಾರದ ಪ್ರಯೋಗಾಲಯಗಳು ಒಂದೇ ದಿನ ಇಷ್ಟು ಮಾದರಿಯನ್ನು ಸಂಗ್ರಹಿಸಿವೆ. ಇದೇ ಅವಧಿಯಲ್ಲಿ ಖಾಸಗಿ ಪ್ರಯೋಗಾಲಯಗಳು 79,878 ಮಂದಿಯ ಮಾದರಿಯನ್ನು ಸಂಗ್ರಹಿಸಿವೆ.
ಇದನ್ನೂ ಓದಿ:ಫೋನ್‌ ಇಲ್ಲದ ಜೀವನ ನನಗೆ ಬೇಡಮ್ಮಾ… ಸಾಯುವುದೇ ಮೇಲು…
ಈ ಮೊದಲು ಒಂದೇ ದಿನ ಸರ್ಕಾರಿ ಲ್ಯಾಬ್‌ಗಳಲ್ಲಿ 3,62,153 ಮಾದರಿಯನ್ನು ಪರೀಕ್ಷೆ ಮಾಡಲಾಗಿತ್ತು. ಇದು ಇಲ್ಲಿಯವರೆಗಿನ ಗರಿಷ್ಠ ಅಂಕಿಅಂಶವಾಗಿತ್ತು. ಆದರೆ ಇದೀಗ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿರುವ ಕಾರಣ, ಕೇಂದ್ರ ಸರ್ಕಾರ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಳ ಮಾಡಿಕೊಳ್ಳುತ್ತಿದೆ.
ಶನಿವಾರ ದೇಶದಲ್ಲಿ 48 ಸಾವಿರಕ್ಕೂ ಅಧಿಕ ಹೊಸ ಕೊ‌ರೊನಾ ಪ್ರಕರಣಗಳು ವರದಿಯಾಗಿವೆ. ಟೆಸ್ಟಿಂಗ್ ಹೆಚ್ಚಳವಾದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆಯೂ ಏರಿಕೆಯಾಗಿದೆ. ಭಾರತದಲ್ಲಿ ಗುಣಮುಖರಾಗುತ್ತಿರುವ ಪ್ರಮಾಣ ಶೇ.63.53ರಷ್ಟಿದೆ. ದೇಶದ ರಾಜಧಾನಿಯಲ್ಲಿ ರಿಕವರಿ ರೇಟ್ ಶೇ.87.29 ಇದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಗಣ್ಯರಿಗೆ ಹುಡುಗಿಯರ ಸಪ್ಲೈ, ಆಟೋ ಡ್ರೈವರ್‌ ಮಗಳ ಭಯಾನಕ ಹಿಸ್ಟರಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
