ನವದೆಹಲಿ:ಕರೊನಾ ಸೋಂಕಿತ ದೇಶಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ಏಕದಿನ ಏರಿಕೆಯಲ್ಲಿ ಪ್ರತಿದಿನ ದಾಖಲೆ ಬರೆಯುತ್ತಿದೆ. ಭಾನುವಾರ ಒಂದೇ ದಿನ 79 ಸಾವಿರ ಜನರಲ್ಲಿ ಸೋಂಕು ದೃಢವಾಗಿದೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಏಕದಿನದ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಅಮೆರಿಕದಲ್ಲಿ 34 ಸಾವಿರ ಪ್ರಕರಣ ಮತ್ತು ಬ್ರೆಜಿಲ್​ನಲ್ಲಿ 15 ಸಾವಿರ ಪ್ರಕರಣ ಕಾಣಿಸಿಕೊಂಡಿವೆ.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಚೇತರಿಕೆ ಪ್ರಮಾಣವೂ ಹೆಚ್ಚಾಗುತ್ತಿದೆ. ಇದುವರೆಗೆ 36.5 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 28 ಲಕ್ಷ ಜನರು ಗುಣಮುಖರಾಗಿದ್ದಾರೆ. ಗುಣಮುಖ ಪ್ರಮಾಣ ಶೇ. 76.62ಕ್ಕೆ ಏರಿಕೆಯಾಗಿದೆ. 64,800 ಜನರು ಸಾವನ್ನಪ್ಪಿದ್ದು, ಮರಣ ಪ್ರಮಾಣ ಶೇ. 1.78ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಅಮಿತ್ ಷಾ ಆಸ್ಪತ್ರೆಯಿಂದ ಬಿಡುಗಡೆ:ಕರೊನಾ ಸೋಂಕಿಗೆ ತುತ್ತಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಅವರಿಗೆ ಆಗಸ್ಟ್ 2ರಂದು ಸೋಂಕು ದೃಢವಾಗಿತ್ತು. ಅದೇ ದಿನ ಗುರುಗ್ರಾಮದ ಮೇದಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 14ರಂದು ಗುಣಮುಖರಾಗಿ, ಮನೆಗೆ ತೆರಳಿದ್ದರು. ಬಳಿಕ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು ಏಮ್್ಸ ಆಸ್ಪತ್ರೆಗೆ ದಾಖಲಾಗಿದ್ದರು. ಸತತ 13 ದಿನಗಳ ಚಿಕಿತ್ಸೆ ನಂತರ ಅವರು ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ.
ಕೆಲ ರಾಜ್ಯಗಳಲ್ಲಿ ಪಾಸಿಟಿವಿಟಿ ಹೆಚ್ಚಳ:ಕಳೆದ 5 ದಿನಗಳಿಂದ ದೇಶದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಕರೊನಾ ಪರೀಕ್ಷೆ ನಡೆಯು ತ್ತಿದ್ದು, ಕೆಲ ರಾಜ್ಯಗಳಲ್ಲಿ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗಿದೆ. ಆಂಧ್ರ ಪ್ರದೇಶದಲ್ಲಿ 2 ವಾರಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 9.5ರಿಂದ ಶೇ. 11.5ಕ್ಕೆ ಹೆಚ್ಚಳವಾಗಿದೆ. ಕರ್ನಾಟಕ, ಮಹಾರಾಷ್ಟ್ರದಲ್ಲಿ ಪಾಸಿಟಿವಿಟಿ ಪ್ರಮಾಣ ದೇಶದ ಸರಾಸರಿ ಪಾಸಿಟಿವಿಟಿ ಪ್ರಮಾಣಕ್ಕಿಂತ ಹೆಚ್ಚಾಗಿದೆ. ತಮಿಳುನಾಡು, ಉತ್ತರ ಪ್ರದೇಶದಲ್ಲಿಯೂ ಈ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.
ಹೈದಾರಾಬಾದ್​ನಲ್ಲಿ ಮೊಹರಂ ಮೆರವಣಿಗೆ:ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರೂ, ಹೈದರಾಬಾದ್​ನಲ್ಲಿ ಮೆರವಣಿಗೆ ಮಾಡಲಾಗಿದೆ. ನೂರಾರು ಜನರು ಮಾಸ್ಕ್ ಧರಿಸದೆ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳದೆಯೇ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೈದರಾಬಾದ್​ನ ದಾದೀರ್​ಪುರದಲ್ಲಿ ಆರಂಭವಾದ ಮೆರವಣಿಗೆ ಚಾರ್​ವಿುನಾರ್ ಮೂಲಕ ಹೋಗಿ ಛಂದೇರ್​ಘಾಟ್​ನಲ್ಲಿ ಕೊನೆಯಾಯಿತು.
ಸೆ. 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವಿಲ್ಲ:ಭಾರತದಲ್ಲಿ ಸೆಪ್ಟೆಂಬರ್ 30ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನವನ್ನು ನಿಷೇಧಿಸಿರುವುದಾಗಿ ಭಾರತೀಯ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಈಗಾಗಲೇ ಸೀಮಿತ ಪ್ರಯಾಣಿಕರ ಸಂಚಾರಕ್ಕೆ ಮಾಡಿಕೊಳ್ಳಲಾಗಿರುವ ಒಪ್ಪಂದದ ಆಧಾರದ ಮೇಲೆ ಸಂಚರಿಸುತ್ತಿರುವ ವಿಮಾನಗಳ ಸಂಚಾರ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ. ಭಾರತ ಅಮೆರಿಕ, ಬ್ರಿಟನ್, ಫ್ರಾನ್ಸ್, ಜರ್ಮನಿ, ಅರಬ್ ಸಂಯುಕ್ತ ಸಂಸ್ಥಾನ, ಕತಾರ್ ಮತ್ತು ಮಾಲ್ದೀವ್ಸ್​ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕೆಲ ವಿಮಾನಗಳ ಸಂಚಾರವನ್ನು ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಆಸ್ಟ್ರೇಲಿಯಾ, ರಷ್ಯಾ, ಬಾಂಗ್ಲಾದೇಶ ಸೇರಿ ಹಲವು ದೇಶಗಳ ಜತೆ ಒಪ್ಪಂದ ಮಾಡಿಕೊಂಡು ವಿಮಾನ ಸಂಚಾರ ನಡೆಸುವುದಾಗಿ ಹೇಳಲಾಗಿದೆ. ತಮಿಳುನಾಡಿನಲ್ಲಿ ಸೆಪ್ಟೆಂಬರ್ 30ರವರೆಗೆ ಲಾಕ್​ಡೌನ್ ಮುಂದುವರಿಕೆ ಮಾಡಲಾಗಿದೆ. ಅದರ ಜತೆ ಕೆಲ ಸಡಿಲಿಕೆಯನ್ನೂ ಮಾಡಲಾಗಿದ್ದು, ಸೆ.1ರಿಂದ ಸಾರ್ವಜನಿಕ ಸಾರಿಗೆ ಮತ್ತು ಸೆ. 7ರಿಂದ ಮೆಟ್ರೋ ರೈಲು ಸೇವೆ ಆರಂಭಿಸುವುದಾಗಿ ತಿಳಿಸಲಾಗಿದೆ.
ಭಾರತದಿಂದ ಕರೊನಾ ಲಸಿಕೆ ಪಡೆಯುವ ಮೊದಲ ರಾಷ್ಟ್ರ ಬಾಂಗ್ಲಾ; ಪುಣೆ ಕಂಪನಿಯಲ್ಲಿ ಬಂಡವಾಳ ಹೂಡಿದ ಬೆಕ್ಸಿಮ್ಕೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 1 =
Remember me
