ನೋಯ್ಡಾ:ನವಜಾತ ಶಿಶುವಿನ ಶವವೊಂದು ಕಸದ ತೊಟ್ಟಿಯಲ್ಲಿ ಪತ್ತೆಯಾದ ವಿಷಯವನ್ನು ತಿಳಿದ ಪೊಲೀಸರು, ತಕ್ಷಣವೇ ಸ್ಥಳಕ್ಕೆ ಆಗಮಿಸಿ ಮಗುವಿನ ಮೃತದೇಹವನ್ನು ವಶಪಡಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದ ಘಟನೆ ನೋಯ್ಡಾದ ಪಾಶ್ ಗ್ರೂಪ್ ಹೌಸಿಂಗ್ ಸೊಸೈಟಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಐದನೇ ಬಾರಿಯೂ ಇಡಿ ಸಮನ್ಸ್​ಗೆ ದೆಹಲಿ ಸಿಎಂ ಗೈರು; ‘ನಾವು ನ್ಯಾಯಾಲಯದಲ್ಲಿ ಉತ್ತರಿಸುತ್ತೇವೆ’ ಎಂದ ಎಎಪಿ
ನವಜಾತ ಶಿಶುವಿನ ಗುರುತನ್ನು ಮತ್ತು ಪ್ರಕರಣಕ್ಕೆ ಸಂಬಂಧಿಸಿದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಸೆಕ್ಟರ್ 104ರ ಎಟಿಎಸ್ ಒನ್ ಹ್ಯಾಮ್ಲೆಟ್‌ನ ಗೋಪುರದ ನೆಲಮಾಳಿಗೆಯಲ್ಲಿ ಪತ್ತೆಯಾದ ಶಿಶುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ರವೇಂದ್ರ ಮಿಶ್ರಾ ಎಂಬುವವರು ಸೊಸೈಟಿಯ ಟವರ್ 7ರ ಎರಡನೇ ನೆಲಮಾಳಿಗೆಯಲ್ಲಿರುವ ಕಸ ಸಂಗ್ರಹ ಪ್ರದೇಶದಲ್ಲಿದ್ದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಕಂಡುಬಂದ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಆದರೆ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಿತೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ,(ಏಜೆನ್ಸೀಸ್).
6ರಿಂದ 12ನೇ ತರಗತಿಯ ಶಾಲಾ ಪಠ್ಯಕ್ರಮಕ್ಕೆ ಭಗವದ್ಗೀತೆ ಸೇರಿಸಲು ಮುಂದಾಯ್ತು ಈ ರಾಜ್ಯ ಸರ್ಕಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 19 =
Remember me
