ಉತ್ತರಪ್ರದೇಶ:ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನವವಿವಾಹಿತರು ತಮ್ಮ ಮದುವೆಯ ರಾತ್ರಿಯೇ ನವದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸೂಚಿಸಲಾಗಿದೆ.
ಪ್ರತಾಪ್ ಯಾದವ್(22), ಪುಷ್ಪಾ (20) ಮೃತ ದಂಪತಿ. ಮದುವೆಯಾದ ರಾತ್ರಿಯೇ ನವದಂಪತಿಗಳು ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಮೇ. 30 ರಂದು ಪ್ರತಾಪ್ ಯಾದವ್ ಹಾಗೂ ಪುಷ್ಪಾ ಮದುವೆ ನಡೆದಿತ್ತು. ಮದುವೆಯಾದ ರಾತ್ರಿ ನವಜೋಡಿ ತಮ್ಮ ಕೋಣೆಗೆ ಹೋಗಿದ್ದಾರೆ. ಮರುದಿನ ಬೆಳಗ್ಗೆ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಪೊಲೀಸರು ಬಂದು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಮರಣೋತ್ತರ ವರದಿಯಲ್ಲಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನವದಂಪತಿ ಪ್ರತಾಪ್ ಮತ್ತು ಪುಷ್ಪಾ ಅವರ ಅಂತ್ಯಕ್ರಿಯೆಯನ್ನು ಪ್ರತಾಪ್ ಅವರ ಗ್ರಾಮದಲ್ಲಿ ಅಪಾರ ಜನಸ್ತೋಮದ ನಡುವೆ ಒಂದೇ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಭಾರತದ ಮೊದಲ ಮಹಿಳಾ ಗಗನಯಾತ್ರಿ ಕಲ್ಪನಾ ಚಾವ್ಲಾ ಬಯೋಪಿಕ್​ನಲ್ಲಿ ಶ್ರದ್ಧಾ ಕಪೂರ್ !

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − 15 =
Remember me
