ಫಿರೋಜಾಬಾದ್​:ಮದುವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಮೃತಪಟ್ಟಿದ್ದು, ಇದರ ಬೆನ್ನಲ್ಲೇ ನವವಿವಾಹಿತೆ ಸೇರಿದಂತೆ ಒಂದೇ ಕುಟುಂಬದ 9 ಮಂದಿಗೆ ಮಹಾಮಾರಿ ಕರೊನಾ ಸೋಂಕು ತಗುಲಿರುವ ಆತಂಕಕಾರಿ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ.
ಮೃತನ ಬಗ್ಗೆ ಮಾಹಿತಿ ನೀಡಿರುವ ಮುಖ್ಯ ವೈದ್ಯಾಧಿಕಾರಿ ಡಾ. ನಿತಾ ಕುಲಶ್ರೇಷ್ಠ, ಸುಮಾರು 10 ದಿನಗಳ ಹಿಂದಷ್ಟೇ ಮೃತನ ಮದುವೆಯಾಗಿತ್ತು. ಅದರ ಬೆನ್ನಲ್ಲೇ ಆತನ ಅನಾರೋಗ್ಯಕ್ಕೀಡಾಗಿದ್ದ. ಡಿಸೆಂಬರ್​ 4ರಂದು ಕೊನೆಯುಸಿರೆಳೆದಿದ್ದಾನೆ. ಆದರೆ, ಆತ ಕರೊನಾ ಪರೀಕ್ಷೆಗೆ ಒಳಗಾಗಿರಲಿಲ್ಲ. ಹೀಗಾಗಿ ಆತನ ವೈರಸ್​ನಿಂದಲೇ ಮೃತಪಟ್ಟಿದ್ದಾನೆಂದು ಹೇಳಲು ಸಾಧ್ಯವಿಲ್ಲ. ಆದರೂ ಆತನ ಕುಟುಂಬ ಸದಸ್ಯರಿಗೆ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಸುಂದರವಾಗಿದ್ದ ಈಕೆಯ ಮುಖ ಹೀಗೇಕಾಯಿತು? ಹುಡುಗಿಯ ಮಾತು ಕೇಳಿದ್ರೆ ಶಾಕ್​ ಆಗ್ತೀರಾ..!
ಪರೀಕ್ಷೆ ಮಾಡಿದಾಗ ನವವಿವಾಹಿತೆ ಸೇರಿದಂತೆ ಕುಟುಂಬದ 9 ಮಂದಿ ಸೋಂಕು ತಗುಲಿರುವುದು ಖಚಿತವಾಗಿದೆ. ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇನ್ನು ಗ್ರಾಮದಲ್ಲಿ ವೈದ್ಯಕೀಯ ಶಿಬಿರ ಸ್ಥಾಪಿಸಲಾಗಿದ್ದು, ಇತರೆ ಮಂದಿಯನ್ನು ಕೋವಿಡ್​-19 ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ನಿತಾ ಕುಲಶ್ರೇಷ್ಠ ಹೇಳಿದರು. ಫಿರೋಜಾಬಾದ್​ನಲ್ಲಿ ಇಲ್ಲಿಯವರೆಗೆ 3,673 ಕೋವಿಡ್​ ಪ್ರಕರಣಗಳು ವರದಿಯಾಗಿದ್ದು, ಸದ್ಯ 171 ಸಕ್ರೀಯ ಪ್ರಕರಣಗಳಿವೆ. 67 ಮಂದಿ ಕರೊನಾಗೆ ಬಲಿಯಾಗಿದ್ದಾರೆಂದು ನೀತಾ ಮಾಹಿತಿ ನೀಡಿದರು.(ಏಜೆನ್ಸೀಸ್​)
ಯಾವೆಲ್ಲ ಉದ್ಯೋಗಿಗಳ ಇಪಿಎಫ್ ಅನ್ನು ಕೇಂದ್ರ ಸರ್ಕಾರ ಭರಿಸಲಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + four =
Remember me
