ಭೋಪಾಲ್​:ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿದಂತೆ ನಾಲ್ವರು ಸಜೀವ ದಹನ ಆಗಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ.
ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ದುರ್ದೈವಿಗಳನ್ನು ಅಖಿಲೇಶ್ ಕುಶ್ವಾಹ, ಗೋಲು ಚೌಧರಿ, ರಾಕೇಶ್ ಕುಶ್ವಾಹ, ಶಿವಾನಿ ಎಂದು ಗುರುತಿಸಲಾಗಿದ್ದು ಮೃತರ ವಯಸು 25 ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹರ್ದಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಕುಮಾರ್​ ಕಂಚನ್​ ವಿಷಯ ತಿಳಿದು ಆಗ್ನಿಶಾಮಕ ಸಿಬ್ಬಂದಿಯೊಟ್ಟಿಗೆ ಸ್ಥಳಕ್ಕೆ ತೆರಳುವಷ್ಟರಲ್ಲೇ ವಾಹನ ಸಂಪೂರ್ಣವಾಗಿ ಸುಟ್ಟು ಹೋಗಿತ್ತು.
ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು ಎಂದು ಹರ್ದಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಕುಮಾರ್​ ಕಂಚನ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twenty =
Remember me
