ವಿಜಯವಾಡ:ಮದುವೆಯಾದ ಒಂದೇ ತಿಂಗಳಲ್ಲಿ ನವವಿವಾಹಿತೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರ್​ ಜಿಲ್ಲೆಯ ಕುಪ್ಪಮ್​ ವಲಯದ ಕುರ್ಮೈಪುರಂನಲ್ಲಿ ನಡೆದಿದೆ.
ಚೈತನ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಳೆದ ತಿಂಗಳು 28ರಂದು ತಂಗವೇಲು ಎಂಬಾತನ ಜತೆ ಮದುವೆಯಾಗಿತ್ತು. ಕೇವಲ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಶರಣಾಗಿರುವು ಪಾಲಕರ ಆಕ್ರಂದನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ನಾದಿನಿಗೆ 9 ಕಡೆ ಇರಿದು ಭಾವ ಆತ್ಮಹತ್ಯೆ: ಬೆಚ್ಚಿಬೀಳಿಸುವ ಪ್ರಕರಣ ಹಿಂದಿದೆ ಸ್ಫೋಟಕ ರಹಸ್ಯ
ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ತಿಳಿದುಬಂದಿದೆ. ಹೀಗಾಗಿ ಗಂಡನ ಮನೆಯ ಮೇಲೆ ಚೈತ್ಯನ್ಯ ಪಾಲಕರು ಮತ್ತು ಸಂಬಂಧಿಕರು ದಾಳಿ ಮಾಡಿ, ಬೆಂಕಿ ಇಟ್ಟಿದ್ದಾರೆ. ಅಲ್ಲದೆ, ಅನೇಕ ಪದಾರ್ಥಗಳನ್ನು ಧ್ವಂಸ ಮಾಡಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ತಿಳಿಗೊಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಲಾಡ್ಜ್​ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − 1 =
Remember me
