ಎರಡು ವರ್ಷಗಳಅವಧಿಗೆ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಜಾಹೀರಾತುಗಳನ್ನು ನೀಡದಂತೆ ಸಲಹೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎನ್​ಬಿಎ (ನ್ಯೂಸ್ ಬ್ರಾಡ್​ಕಾಸ್ಟಿಂಗ್ ಅಸೋಸಿಯೇಷನ್) ಅಸಮಾಧಾನ ವ್ಯಕ್ತಪಡಿಸಿದೆ.
ಕರೊನಾ ವೈರಸ್​ನ ಈ ಸಮಯದಲ್ಲಿ ಪತ್ರಕರ್ತರು ಪ್ರಾಣದ ಹಂಗು ಬಿಟ್ಟು ಕೆಲಸ ಮಾಡುತ್ತಿದ್ದಾರೆ. ಮಾಧ್ಯಮಗಳಿಗೆ ಸರ್ಕಾರ ಜಾಹೀರಾತುಗಳನ್ನು ನಿಲ್ಲಿಸುವುದು ಸರಿಯಲ್ಲ ಎಂದು ಹೇಳಿದೆ. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿರುವ ಕಾರಣ ಜಾಹೀರಾತುಗಳಿಗೆ ಕಡಿವಾಣ ಹಾಕಬೇಕು ಎಂದು ಸೋನಿಯಾ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಆದರೆ ಇದರಿಂದ ಪತ್ರಕರ್ತರಿಗೆ ಕಷ್ಟವಾಗಲಿದೆ ಎಂದು ಎನ್​ಬಿಎ ತಿಳಿಸಿದೆ.
ಈಗಾಗಲೇ ಆರ್ಥಿಕ ಬಿಕ್ಕಟ್ಟಿನಿಂದಾಗಿ ಜಾಹೀರಾತುಗಳು ಸಂಖ್ಯೆ ಕಡಿಮೆಯಾಗಿದೆ. ಜತೆಯಲ್ಲಿ ಹಗಲು ರಾತ್ರಿಯೆನ್ನದೆ ದುಡಿಯುತ್ತಿರುವ ಪತ್ರಕರ್ತರ ಸುರಕ್ಷತೆಗಾಗಿ ಸಂಸ್ಥೆಗಳು ಸಾಕಷ್ಟು ಖರ್ಚು ಮಾಡುತ್ತಿವೆ. ಹೀಗಿರುವಾಗ ಜಾಹೀರಾತು ನಿಷೇಧಿಸುವುದು ಸಮಯೋಚಿತವಲ್ಲ ಎಂದಿದೆ.
ಕರೊನಾದಿಂದ ಬಚಾವ್​ ಆದ ಬಾಬಿ ಡಾಲ್​ ಸಿಂಗರ್​ ಕನ್ನಿಕಾ ಕಪೂರ್​ಗೆ ಮತ್ತೊಂದು ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 13 =
Remember me
