ಚೆನ್ನೈ:ಕರೊನಾದಿಂದಾಗಿ ದೇಶದಲ್ಲಿ ಮಹಾರಾಷ್ಟ್ರ ಹೊರತುಪಡಿಸಿದರೆ, ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿದ್ದ ತಮಿಳುನಾಡಿನಲ್ಲೀಗ, ಕೊಂಚ ಆಶಾಭಾವ ಮೂಡಿದೆ.ಅದಕ್ಕಿಂತ ಮುಖ್ಯವಾಗಿ ರಾಜಧಾನಿ ಚೆನ್ನೈನಲ್ಲಿ ಹೊಸ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಕೋವಿಡ್​ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುವ ಅವಧಿಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.
ಚೆನ್ನೈಗೆ ಹೋಲಿಸಿದಲ್ಲಿ ಇತರ ಹಾಟ್​ಸ್ಪಾಟ್​ಗಳಲ್ಲಿ ಈ ಅವಧಿಯಲ್ಲಿ ಎರಡು ಪಟ್ಟಿಗಿಂತಲೂ ಹೆಚ್ಚಾಗಿದೆ. ಉದಾಹರಣೆಗೆ ರಾಯಪುರಂ ಹಾಗೂ ತೊಂಡಿಯಾರ್​ ಪೇಟ್​ ಕ್ರಮವಾಗಿ ಈ ಅವಧಿ 140 ಹಾಗೂ 28 ದಿನಗಳಾಗಿವೆ. ಇನ್ನಿ ಇಡೀ ನಗರವನ್ನು ಪರಿಗಣಿಸುವುದಾದರೆ ಈ ಸಮಯ 63 ದಿನಗಳದ್ದಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ;ಎಂಟು ನಗರಗಳಲ್ಲಿ ಜಾರಿಯಲ್ಲಿದೆ ದೇಶೀಯ ಕರೊನಾ ಲಸಿಕೆ ಕ್ಲಿನಿಕಲ್​ ಟ್ರಯಲ್​; ಹೇಗಿದೆ ವ್ಯಾಕ್ಸಿನ್​ ಪಡೆದವರ ಆರೋಗ್ಯ?
ಸಾವಿನ ಸಂಖ್ಯೆಯಲ್ಲಿ ಏರಿಕೆ:ಹೊಸ ಪ್ರಕರಣಗಳ ಸಂಖ್ಯೆ ನಿಯಂತ್ರಣದಲ್ಲಿದೆ ಎಂದುಕೊಳ್ಳುತ್ತಿರುವಾಗಲೇ, ಸಾವಿನ ಸಂಖ್ಯೆ ಎರುತ್ತಿರುವುದು ಚಿಂತೆಗೀಡು ಮಾಡಿದೆ. ಕಳೆದ ಐದು ದಿನಗಳಲ್ಲಿ 500 ಜನರು ಮೃತಪಟ್ಟಿದ್ದರೆ, ಸೋಮವಾರ 109 ಜನರು ಕೋವಿಡ್​ಗೆ ಬಲಿಯಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗಲು ಕೋವಿಡ್​ನೊಂದಿಗೆ ಇತರ ದೀರ್ಘಕಾಲದ ಕಾಯಿಲೆಯಿಂದ ನರಳುತ್ತಿರುವುದೇ ಆಗಿದೆ ಎಂದು ಹೇಳಲಾಗಿದೆ.
ತಮಿಳುನಾಡಿನಲ್ಲಿ 2.68 ಲಕ್ಷ ಕೋವಿಡ್​ ರೋಗಿಗಳಿದ್ದರೆ, ಇದರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ 55,152 ಆಗಿದೆ. ಆದರೆ, ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳ 75 ಸಾವಿರ ದಾಟಿದೆ.
ಬೈರುತ್​ ಭಯಾನಕ ಸ್ಫೋಟಕ್ಕೆ ಕುಸಿದದ್ದು ಬರೀ ಕಟ್ಟಡಗಳಲ್ಲ…, ಇಡೀ ದೇಶದ ಆಹಾರ ಭದ್ರತೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − four =
Remember me
