ನವದೆಹಲಿ:ಎನ್ಐಎ ಅಧಿಕಾರಿಗಳಿಂದ ಐದು ರಾಜ್ಯದ ಹದಿನಾಲ್ಕು ಕಡೆ ಏಕ‌ಕಾಲಕ್ಕೆ ದಾಳಿ ನಡೆಸಲಾಗಿದೆ. ಪಿಎಫ್ಐ ಸಂಘಟನೆಗಳು ಉಗ್ರಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಹಿನ್ನಲೆ ದಾಳಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸರ್ಕಾರಿ ಕಾನೂನು ಕಾಲೇಜು ಆರಂಭಕ್ಕೆ ಪ್ರಸ್ತವಾನೆ
ಭಾರತದಲ್ಲಿ 2047ರ ಒಳಗೆ ಪಿಎಫ್ಐ ಸೇನೆ ಸ್ಥಾಪಿಸಲು ಮುಂದಾಗಿದ್ದ ಶಂಕೆಯ ಹಿನ್ನಲೆ ದಾಳಿ ಮಾಡಲಾಗಿದ್ದು, ಯುವಕರಿಗೆ ಅತಿ ಹೆಚ್ಚು ಪ್ರೋತ್ಸಾಹಿಸಿ, ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ತನಿಖೆಯಲ್ಲಿ ಮಾಹಿತಿ ಪತ್ತೆಯಾಗಿದೆ. ಶಸ್ತ್ರಾಸ್ತ್ರ ತರಬೇತಿ‌, ಐರನ್ ರಾಡ್ಸ್, ಕತ್ತಿಗಳ ತರಬೇತಿ ಕೂಡ ನಡೆಸಿದ್ದ ಬಗ್ಗೆ ಶೀಘ್ರ ಕೇಳಿಬಂದ ಹಿನ್ನಲೆ ಕೆಲ ಪಿಎಫ್ಐ ಏಜೆಂಟ್​ಗಳನ್ನು ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಏನಾಯ್ತು ಇವರಿಗೆಲ್ಲ? ಇಂದ್ಯಾಕೆ ಈ ಥರ..?: ಇಲ್ಲಿದೆ ವಿವರ…
ಐದು ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಮತ್ತು ಬಿಹಾರದ ಇತರ ಸ್ಥಳಗಳಲ್ಲಿ ಎನ್​ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಳಿ ಮಾಡಲಾಗಿದ್ದು, ದೋಷಾರೋಪಣೆ ಮಾಡುವ ಡಿಜಿಟಲ್ ಸಾಧನಗಳು ಮತ್ತು ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ,(ಏಜೆನ್ಸೀಸ್).
ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ?; ಇಷ್ಟೊಂದು ಧ್ವೇಷ ಯಾಕೆ: ನಟ ಉಪೇಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + one =
Remember me
