ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಲಷ್ಕರ್​-ತೋಯ್ಬಾ ಸಂಘಟನೆಯ ಎಂಟು ಮಂದಿ ಶಂಕಿತ ಉಗ್ರ ವಿರುದ್ಧ ರಾಷ್ಟ್ರೀಯ ತನಿಖಾ ದಳ (NIA ಚಾರ್ಜ್​ಶೀಟ್​ ಸಲ್ಲಿಸಿದೆ.
ಎಂಟು ಮಂದಿಯ ಪೈಕಿ ಆರು ಮಂದಿಯನ್ನು ಸೆರೆಹಿಡಿಯಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ.
ಇದನ್ನೂ ಓದಿ:ಬಾಕ್ಸ್​ಆಫೀಸ್​ನಲ್ಲಿ ಮುಂದುವರೆದ ಕಾಟೇರನ ಅಬ್ಬರ; ಎರಡನೇ ವಾರಕ್ಕೆ ಗಳಿಸಿದ್ದೆಷ್ಟು
ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಸ್ಟರ್​ಮೈಂಡ್​ ಕೇರಳ ಮೂಲದ ನಸೀರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು NIA ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ವರ್ಷ ಜುಲೈ 19ರಂದು ಬೆಂಗಳೂರಲ್ಲಿ ಬಂಧಿತರಾಗಿದ್ದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿದೆ. ಇವರೆಲ್ಲರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಫೋಟಕಗಳ ಸಾಗಣೆ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − ten =
Remember me
