ಶ್ರೀನಗರ:ಭಯೋತ್ಪಾದನಾ ಚಟುವಟಿಕೆ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ಸೋಮವಾರ ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ 9 ಕಡೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಜೈಲ್​ ಅನುಭವ ಬಿಚ್ಚಿಟ್ಟ ಸೋನುಗೌಡ? ಈ ಚೆಲುವೆಯ ಅಕೌಂಟ್‌ನಲ್ಲಿ ಎಷ್ಟಿದೆ? ಎಷ್ಟು ದುಡಿಯುತ್ತಿದ್ದಾಳೆ? ವಿವರ ಇಲ್ಲಿದೆ..
ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ 9 ಸ್ಥಳಗಳಲ್ಲಿ ಭದ್ರತಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪಾಕಿಸ್ತಾನ್​ ಮೂಲದ ಉಗ್ರಗಾಮಿ ಸಂಘಟನೆಗಳಾದ ಲಷ್ಕರ್ ಎ ತಯ್ಬಾ, ಜೈಷ್ ಎ ಮೊಹಮ್ಮದ್, ಹಿಬ್ಬುಲ್ ಮುಜಾಹಿದ್ದೀನ್, ಅಲ್ ಬದರ್, ಅಲ್ ಖೈದಾಗಳು ರೂಪಿಸಿರುವ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಎನ್ ಐಎ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ರೂಪುಗೊಂಡಿರುವ ರೆಸಿಸ್ಟೆನ್ಸ್ ಫ್ರಂಟ್, ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ, ಮುಜಾಹಿದ್ದೀನ್ ಗಜ್ಞಾತ್ ಉಲ್ ಹಿಂದ್, ಜಮ್ಮು ಮತ್ತು ಕಾಶ್ಮೀರ ಫ್ರೀಡಂ ಫೈಟರ್ಸ್, ಕಾಶ್ಮೀರ್ ಟೈಗರ್ಸ್ ಮತ್ತಿತರ ಸಂಘಟನೆಗಳ ಸಂಚುಗಳನ್ನು ಭೇದಿಸಲು ಎಎನ್‌ಐ ಈ ಕಾರ್ಯಾಚರಣೆ ನಡೆಸುತ್ತಿದೆ.
ದಾಳಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನವೀಕರಿಸಿದ ಅಮೆರಿಕಾ ಬಂಗಲೆಗೆ ಪ್ರಿಯಾಂಕಾ ಚೋಪ್ರಾ ದಂಪತಿ.. ಇದರ ಮೌಲ್ಯ ಎಷ್ಟು ಸಾವಿರ ಕೋಟಿ ಗೊತ್ತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
