ನವದೆಹಲಿ:ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಉಗ್ರಗಾಮಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಭಾರತದಲ್ಲಿ ಭಯೋತ್ಪಾದನೆ ಹರಡುವ ಸಲುವಾಗಿ ದೇಶದಲ್ಲಿ ಯುವಕರನ್ನು ನೇಮಿಸಿ ಉಗ್ರಗಾಮಿಗಳನ್ನಾಗಿಸಲು ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (ಎಕ್ಯೂಐಎಸ್) ಮತ್ತು ತೆಹರಿಕ್-ಇ-ತಾಲಿಬಾನ್ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ಎನ್​ಐಎ ಗುರುವಾರ ಈ ದಾಳಿಗಳನ್ನು ನಡೆಸಿದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆದ ಅನೇಕ ದಾಳಿಗಳಲ್ಲಿ ಹಲವನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಮೂರು ಸ್ಥಳಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದು ಸ್ಥಳದಲ್ಲಿ ಶೋಧದ ಸಮಯದಲ್ಲಿ ಹಲವಾರು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಆದಿತ್ಯ ಎಲ್​-1 ಮಿಷನ್​: ಇಸ್ರೋದಿಂದ ತಿರುಪತಿಯಲ್ಲಿ ಮತ್ತೆ ಪೂಜೆ
ಪಿತೂರಿಯಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಲು ಮತ್ತು ಈ ಎರಡು ಭಯೋತ್ಪಾದಕ ಸಂಘಟನೆಗಳ ಕಾನೂನುಬಾಹಿರ ಹಾಗೂ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯಲು ಸಲುವಾಗಿ ಎನ್ಐಎ ಈ ಸಾಧನಗಳನ್ನು ಪರಿಶೀಲಿಸುತ್ತಿದೆ.
ಈ ನಿಷೇಧಿತ ಸಂಘಟನೆಗಳಿಂದ ಈ ಹಿಂದೆ ನೇಮಕಗೊಂಡ ಇಬ್ಬರು ಆರೋಪಿಗಳ ವಿರುದ್ಧ 2023ರ ಏಪ್ರಿಲ್​​ನಲ್ಲಿ ದಾಖಲಾದ ಪ್ರಕರಣದ ಎನ್ಐಎ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ. ಅಫ್ಘಾನಿಸ್ತಾನದಲ್ಲಿ ಭೂಮಿ ಖರೀದಿಸಲು ವಿದೇಶಕ್ಕೆ ಹಣ ವರ್ಗಾವಣೆ ಸೇರಿದಂತೆ ಭಯೋತ್ಪಾದಕ ಸಂಬಂಧಿತ ಸರಣಿ ಚಟುವಟಿಕೆಗಳಲ್ಲಿ ಆ ಇಬ್ಬರೂ ಭಾಗಿಯಾಗಿದ್ದರು.
ಇದನ್ನೂ ಓದಿ:ಕೋಚಿಂಗ್​ಗೆ ತೆರಳುವ ಮಕ್ಕಳೊಂದಿಗೆ ಮನೆ ಬಿಡುತ್ತಿರುವ ತಂದೆ-ತಾಯಿ, ಅಜ್ಜ-ಅಜ್ಜಿ; ಕಾರಣ ಭಯಾನಕ!
ಅವರಿಬ್ಬರು ಭಾರತದಲ್ಲಿ ಸಕ್ರಿಯವಾಗಿರುವ ತಮ್ಮ ಭಯೋತ್ಪಾದಕ ರಂಗಗಳ ಚಟುವಟಿಕೆಗಳನ್ನು ಮುಂದುವರಿಸಲು ಯುವಕರನ್ನು ಈ ಎರಡು ಸಂಘಟನೆಗಳಿಗೆ ನೇಮಕಾತಿ ಮಾಡುವಲ್ಲಿ ಭಾಗಿಯಾಗಿದ್ದರು ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿತ್ತು. ಆ ಪಿತೂರಿಯು ಭಾರತದಲ್ಲಿ ಭಯೋತ್ಪಾದನೆ ಹರಡುವ, ಶಾಂತಿ ಮತ್ತು ಕೋಮು ಸೌಹಾರ್ದತೆ ಭಂಗಗೊಳಿಸುವ ಗುರಿ ಹೊಂದಿತ್ತು.
ಎಕ್ಯೂಐಎಸ್ ಭಾರತೀಯ ಉಪಖಂಡದಲ್ಲಿ ಇಸ್ಲಾಮಿಕ್ ರಾಜ್ಯ ಮತ್ತು ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪಿಸಲು ಶ್ರಮಿಸುತ್ತಿರುವ ಉಗ್ರಗಾಮಿ ಸಂಘಟನೆಯಾಗಿದ್ದರೆ, ತೆಹರಿಕ್-ಇ-ತಾಲಿಬಾನ್ ಅಫ್ಘಾನ್-ಪಾಕಿಸ್ತಾನ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಸ್ಲಾಮಿಕ್ ಸಶಸ್ತ್ರ ಉಗ್ರಗಾಮಿ ಗುಂಪುಗಳನ್ನು ಒಳಗೊಂಡ ಸಂಘಟನೆಯಾಗಿದೆ.
ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!

ನೆಲದಡಿಯಲ್ಲಿದೆ ಎರಡಂತಸ್ತಿನ ಮನೆ; ಇದರ ನಿರ್ಮಾಣಕ್ಕೆ ಈತ ತೆಗೆದುಕೊಂಡ ಸಮಯ 12 ವರ್ಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 13 =
Remember me
