ಚೆನ್ನೈ:ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಅರಿಯಲೂರ್ ಜಿಲ್ಲೆಯಲ್ಲಿ ನಡೆದಿದೆ. ಅರಿಯಲೂರು ಜಿಲ್ಲೆಯ ವೆಟ್ರಿಯೂರು ಗ್ರಾಮದ ಬಳಿ ಇರುವ ವೀರಗಾಲೂರು ಬಳಿ ದುರ್ಘಟನೆ ಸಂಭವಿಸಿದೆ.
ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದನ್ನು ಪೊಲೀಸ್​ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಘಟನೆ ಬೆಳಗ್ಗೆ 10 ಘಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಇಲಾಖೆಯವರು ಯಶಸ್ವಿಯಾಗಿ ನಂದಿಸಿದ್ದಾರೆ ಎಂದು ಹಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
VIDEO | Several feared dead after an explosion occured at a firecracker factory in Tamil Nadu’s Ariyalur. More details are awaited.pic.twitter.com/avsOrMRrlt
ಇದನ್ನೂ ಓದಿ:ಬಹುಕೋಟಿ ಹಗರಣ; ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್
ಘಟನೆಗೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತಪಟ್ಟವರಿಗೆ ತಲಾ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 1 ಲಕ್ಷ ರೂಪಾಯಿ, ಸಣ್ಣಪುಟ್ಟ ಗಾಯಗಳಾಗಿರುವವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಗಾಯಗೊಂಡಿರುವವರನ್ನು ತಂಜಾವೂರಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ವಿಶೇಷ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಘಟನಾ ಸ್ಥಳಕ್ಕೆ ಸಚಿವರಾದ ಶಿವಶಂಕರ್​ ಹಾಗೂ ಗಣೇಶನ್​ರನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯ ಹಾಗೂ ಪರಿಹಾರ ಚಟುವಟಿಕೆಗಳನ್ನು ತ್ವರಿತಗೊಳಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + ten =
Remember me
