ಪಟ್ಬಾ:ಬಿಸಿಲಿನ ಆರ್ಭಟಕ್ಕೆ ತತ್ತರಿಸಿದ ಬಿಹಾರಕ್ಕೆ ಇದೀಗ ವರುಣ ದೇವ ಕೃಪೆ ತೋರಿದ್ದು, ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಇದರ ನಡುವೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಡಿಲು ಬಡಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು ಎಚ್ಚರಿಕೆಯಿಂದಿರುವಂತೆ ಜನರಿಗೆ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು, ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರ ಜಿಲ್ಲೆಯಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಮೃತರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ವಿಪತ್ತು ನಿರ್ವಹಣಾ ಪಡೆ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಸಿಎಂ ಜನರಿಗೆ ಮನವಿ ಮಾಡಿರುವುದಾಗಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 3 =
Remember me
