ಲಖನೌ:ಆಟೋ-ಗ್ಯಾಸ್​ ಟ್ಯಾಂಕರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಗು, ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟು, 7ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಪ್ರತಾಪ್​ಗಢ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯೂ ವಾರಣಾಸಿ-ಲಕನೌ ಹೆದ್ದಾರಿಯಲ್ಲಿ ನಡೆದಿದ್ದು, ಒನ್​ವೇನಲ್ಲಿ ವೇಗವಾಗಿ ಬರುತ್ತಿದ್ದ ಗ್ಯಾಸ್​ಟ್ಯಾಂಕರ್​ ಚಾಲಕನ ನಿಯಮತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡದು ಬಳಿಕ ಪಲ್ಟಿಯಾದ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೇತ್ವಾರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಭೈರವಪುರ ನಿವಾಸಿ ಆಟೋ ಚಾಲಕ ಸತೀಶ್​ ಗೌತಮ್​(26) ತನ್ನ ವಾಹನದಲ್ಲಿ 15 ಪ್ರಯಾಣಿಕರನ್ನು ಹೊತ್ತು ಮೋಹನ್​ಗಂಜ್​ ಕಡೆ ತೆರಳುತ್ತಿದ್ದ. ಈ ವೇಳೆ ಗ್ಯಾಸ್​ ಟ್ಯಾಂಕರ್​ ಒಂದು ಒನ್​​ವೇನಲ್ಲಿ ವೇಗವಾಗಿ ಬರುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:VIDEO| ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಇರಿದು ಕೊಂದ ಪಾಗಲ್​ ಪ್ರೇಮಿ
ಲಾರಿ ಆಟೋಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ಮಗು, ಇಬ್ಬರು ಮಹಿಳೆಯರು ಸೇರಿದಂತೆ 9 ಮಂದಿ ಮೃತಪಟ್ಟು, 6ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಲ ನೆರವಿಗೆ ಧಾವಿಸಿದ ಸ್ಥಳೀಯರು ತಕ್ಷಣವೇ ಅವರೆಲ್ಲರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಜೇತ್ವಾರಾ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಅಪಘಾತದ ಕುರಿತು ಟ್ವೀಟ್​ ಮಾಡಿ ಸಂತಾಪ ಸೂಚಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ಹಾಗೂ ಗಾಯಾಳುಗಳಿಗೆ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
#UPCM@myogiadityanathने जनपद प्रतापगढ़ में सड़क हादसे में हुई जनहानि पर गहरा दुःख प्रकट किया है। मुख्यमंत्री जी ने दिवंगतों की आत्मा की शांति की कामना करते हुए शोक संतप्त परिजनों के प्रति संवेदना व्यक्त की है।मुख्यमंत्री जी ने मृतकों के परिजनों को ₹02-02 लाख एवं गंभीर घायलों…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − ten =
Remember me
