ಭೋಪಾಲ್​:ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆಯ ಕೆಲ ಭಾಗ ಕುಸಿದು ಬಿದ್ದಿರುವ ಘಟನೆ ಭೋಪಾಲ್​ನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಾಳುಗಳಾಗಿರುವುದಾಗಿ ವರದಿಯಾಗಿದೆ.
ಇಂದು ಬೆಳಗ್ಗೆ 9 ಗಂಟೆಯ ಸಮಯಕ್ಕೆ ಭೋಪಾಲ್​ ರೈಲ್ವೆ ನಿಲ್ದಾಣದ ಮೂರನೇ ಪ್ಲಾಟ್​ಫಾರಂ ಸಮೀಪದ ಪಾದಚಾರಿ ಮೇಲ್ಸೇತುವೆಯ ಕೆಲ ಭಾಗ ಕುಸಿದು ಬಿದ್ದಿದೆ. ಆಕಸ್ಮಿಕವಾಗಿ ನಡೆದ ಘಟನೆಯಿಂದಾಗಿ ಮೇಲ್ಸೇತುವೆಯ ಬಳಿ ಇದ್ದ ಒಂಬತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಸಹ ಪ್ರಯಾಣಿಕರ ಸಹಾಯದೊಂದಿಗೆ ತಕ್ಷಣವೇ ಗಾಯಾಳುಗಳನ್ನು ಆ್ಯಂಬುಲೆನ್ಸ್​ನಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ಕುರಿತಾಗಿ ಟ್ವೀಟ್​ ಮಾಡಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್​ ನಾಥ್​, “ಭೋಪಾಲ್​ನ ರೈಲ್ವೆ ನಿಲ್ದಾಣದಲ್ಲಿ, ಪಾದಚಾರಿ ಮೇಲ್ಸೇತುವೆಯ ಒಂದು ಭಾಗ ಕುಸಿದಿರುವುದು ಒಂದು ದುರಂತ. ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳಿಗೆ ನೆರವು ನೀಡುವಂತೆ ನಿದೇರ್ಶಿಸಲಾಗಿದೆ” ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
भोपाल रेलवे स्टेशन पर एक फुटओवर ब्रिज के एक हिस्से के गिरने से हुआ हादसा बेहद दुःखद।इस हादसे में कुछ लोगों के घायल होने की जानकारी मिली है।घायलों के शीघ्र स्वस्थ होने की ईश्वर से कामना।प्रशासन को घायलो के समुचित इलाज व हरसंभव मदद के निर्देश।
— Kamal Nath (@OfficeOfKNath)February 13, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
