ನವದೆಹಲಿ:ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿಫಾ ವೈರಸ್ ಹಾವಳಿ ಉಂಟಾಗಿದ್ದು, ಈಗಾಗಲೇ ಇಬ್ಬರು ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕ ಆವರಿಸಿದ್ದು, ಅದನ್ನು ಹೆಚ್ಚಿಸುವಂಥ ಇನ್ನೊಂದು ಸುದ್ದಿ ಹೊರಬಿದ್ದಿದೆ.
ಅದೇನೆಂದರೆ ನಿಫಾ ವೈರಸ್ ಕೋವಿಡ್​ಗಿಂತಲೂ ಮಾರಕ. ಇಂಥದ್ದೊಂದು ಮಾಹಿತಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಕೋವಿಡ್ ಸಾಂಕ್ರಾಮಿಕಕ್ಕಿಂತಲೂ ಮಾರಕ ಎಂದು ಐಸಿಎಂಆರ್​ ಡೈರೆಕ್ಟರ್ ಜನರಲ್ ರಾಜೀವ್ ಬಹ್ಲ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಇವರು, ಕೋವಿಡ್​ನಿಂದ ಸಂಭವಿಸಬಹುದಾದ ಮರಣ ಪ್ರಮಾಣ ಶೇ. 2-3 ಇತ್ತು. ಆದರೆ ನಿಫಾ ಮಾರ್ಟಾಲಿಟಿ ರೇಟ್​ ಶೇ. 40ರಿಂದ 70ರಷ್ಟಿದೆ ಎಂದು ಹೇಳಿದ್ದಾರೆ. 2018ರಿಂದ ಕೇರಳದಲ್ಲಿ ಆಗಾಗ ನಿಫಾ ಹಾವಳಿ ಇಡುತ್ತಿದ್ದು, ಇದು ಬಾವಲಿಯಿಂದ ಬರುತ್ತಿದೆ ಎನ್ನಲಾಗಿದೆ. ಆದರೆ ಬಾವಲಿಯಿಂದ ಮನುಷ್ಯರಿಗೆ ಹೇಗೆ ಹರಡುತ್ತಿದೆ ಎಂಬುದ ಸ್ಪಷ್ಟವಾಗಿಲ್ಲ ಎಂದಿದ್ದಾರೆ.
ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಹೇಗೆ ಸಂಬಂಧ?: ಇಲ್ಲಿದೆ ಕಾಂಗ್ರೆಸ್​ ವಿವರಣೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twenty − two =
Remember me
