ಟೋಕಿಯೋ:ಇಂದು ನಡೆದ ಪುರುಷರ ಜಾವೆಲಿನ್ ಥ್ರೋ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ, ಭಾರತದ ನೀರಜ್ ಚೋಪ್ರ ಪ್ರಥಮ ಸ್ಥಾನ ಪಡೆಯುವ ಮೂಲಕ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಜಪಾನ್​​ನ ಟೋಕಿಯೋ ಒಲಿಂಪಿಕ್ಸ್​​ನಲ್ಲಿ 23 ವರ್ಷದ ನೀರಜ್​ 87.58 ಮೀಟರ್ ದೂರ ಎಸೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದ ನೀರಜ್ ಜಾವಲಿನ್ ಥ್ರೋ ಸ್ಫರ್ಧೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ. 120 ವರ್ಷಗಳ ಬಳಿಕ ಭಾರತಕ್ಕೆ ಅಥ್ಲೀಟ್ಸ್​ನಲ್ಲಿ ಚಿನ್ನದ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ. 23 ವರ್ಷದ ನೀರಜ್ ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಹಾಗೂ ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಎಸೆದರು. ಆದರೆ ಮೂರನೇ ಪ್ರಯತ್ನ 76.79 ಮೀ. ಎಸೆದಿದ್ದರು. ಇದರಲ್ಲಿ ಎರಡು ಸುತ್ತು ನೀರಜ್ ಅವರೇ ಮುಂಚೂಣಿ ಸ್ಥಾನ ಕಾಯ್ದಿರಿಸಿಕೊಂಡಿದ್ದರು.
ಇದನ್ನೂ ಓದಿ:ಭಾರತಕ್ಕೆ ಮತ್ತೊಂದು ಪದಕ: ಕಂಚು ಗೆದ್ದ ಕುಸ್ತಿಪಟು ಬಜರಂಗ್ ಪೂನಿಯ
ಇನ್ನು ಎರಡನೇ ಪ್ರಯತ್ನದಲ್ಲಿ ಎಲ್ಲರಿಗಿಂತಲೂ ಹೆಚ್ಚು ದೂರ ಜಾವೆಲಿನ್ ಎಸೆದಿದ್ದರಿಂದ ಪ್ರಥಮ ಸ್ಥಾನ ಪಡೆದು, ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಈ ಹಿಂದೆ 2018ರ ಏಷ್ಯನ್ ಗೇಮ್ಸ್​ನಲ್ಲಿ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು.
ಒಲಿಂಪಿಕ್ಸ್​: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ ಅಭಿನಂದನೆಗಳ ಸುರಿಮಳೆ: 6 ಕೋಟಿ ರೂ. ಬಹುಮಾನ ಘೋಷಿಸಿದ ಹರಿಯಾಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fourteen =
Remember me
