ನವದೆಹಲಿ:ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲೊಬ್ಬಮುಕೇಶ್​ ಕುಮಾರ್​ ಸಲ್ಲಿಸಿದ್ದ ದಯಾ ಅರ್ಜಿಯನ್ನು ಗೃಹ ಸಚಿವಾಲಯ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಕಳುಹಿಸಿಕೊಟ್ಟಿದೆ.
ದಯಾ ಅರ್ಜಿಯನ್ನು ತಿರಸ್ಕರಿಸಲು ಶಿಫಾರಸಿನೊಂದಿಗೆ ರಾಷ್ಟ್ರಪತಿ ಅವರಿಗೆ ಕಳುಹಿಸಲಾಗಿದೆ. ಮಂಗಳವಾರ ಸುಪ್ರೀಂಕೋರ್ಟ್​ ಮುಕೇಶ್​ ಕುಮಾರ್ ಕ್ಯುರೇಟಿವ್​ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ದಯಾ ಅರ್ಜಿ ಸಲ್ಲಿಸಿದ್ದ.
ತಿಹಾರ್ ಜೈಲು ಆಡಳಿತದ ಪರ ನ್ಯಾಯವಾದಿ ರಾಹುಲ್ ಮೆಹ್ರಾ ಅಫಿಡವಿಟ್ ಸಲ್ಲಿಸಿದ್ದು, ರಾಷ್ಟ್ರಪತಿಗಳು ದಯಾ ಅರ್ಜಿಯನ್ನು ತಿರಸ್ಕರಿಸಿದ ಬಳಿಕವಷ್ಟೇ ಅಪರಾಧಿಗಳನ್ನು ಗಲ್ಲಿಗೇರಿಸುವುದು ಸಾಧ್ಯ. ಹಾಗಾಗಿ ಗಲ್ಲಿಗೇರಿಸುವ ಹೊಸ ದಿನಾಂಕವನ್ನು ತಿಳಿಸಬೇಕು ಎಂದು ಕೊರ್ಟ್​ಗೆ ಮನವಿ ಮಾಡಿಕೊಂಡಿದ್ದರು.
ವಿಳಂಬದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ, ಅವರಿಗೆ ಹಕ್ಕುಗಳಿರಬೇಕಾದರೆ, ನಮಗೂ ನ್ಯಾಯಕ್ಕಾಗಿ ಹೋರಾಡುವ ಹಕ್ಕಿದೆ. ನನ್ನ ಮಗಳು ಮೃತ ಪಟ್ಟ 7 ವರ್ಷದಿಂದ ನಾವು ನ್ಯಾಯವನ್ನೇ ಕೇಳುತ್ತಿದ್ದೇವೆ ಎಂದಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 1 =
Remember me
