ನವದೆಹಲಿ:ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಪ್ರತ್ಯೇಕವಾಗಿ ಗಲ್ಲಿಗೇರಿಸಲು ಅನುಮತಿ ಕೋರಿ ಕೇಂದ್ರ ಮತ್ತು ದೆಹಲಿ ಸರ್ಕಾರಗಳು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮುಂದಿನ ಮಂಗಳವಾರ ವಿಚಾರಣೆ ನಡೆಸಲಿದೆ. ಜತೆಗೆ ಅಪರಾಧಿಗಳ ಗಲ್ಲುಶಿಕ್ಷೆಗೆ ತಡೆ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ದೆಹಲಿ ಹೈಕೋರ್ಟ್​ನ ಆದೇಶವನ್ನೂ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಕೇಂದ್ರದ ಪರ ಹಾಜರಾಗಿದ್ದ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಿರ್ಭಯಾ ಪ್ರಕರಣದಲ್ಲಿ ದೇಶದ ತಾಳ್ಮೆಯನ್ನು ಸಾಕಷ್ಟು ಪರೀಕ್ಷಿಸಲಾಗಿದೆ. ಸುಪ್ರೀಂಕೋರ್ಟ್ ಈ ತೀರ್ಪು ನೀಡಬೇಕು. ನಾಲ್ವರೂ ಅಪರಾಧಿಗಳಿಗೆ ಗಲ್ಲುಶಿಕ್ಷೆ ಕುರಿತು ತಕ್ಷಣ ನೋಟಿಸ್ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. ಆದರೆ ಇದರಿಂದ ಪ್ರಕರಣ ಮತ್ತಷ್ಟು ವಿಳಂಬವಾಗುತ್ತದೆ ಎಂದು ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ಪೀಠ ಕೇಂದ್ರದ ಮನವಿಯನ್ನು ತಿರಸ್ಕರಿಸಿತು.
ದೆಹಲಿ ವಿಚಾರಣಾ ನ್ಯಾಯಾಲಯ ಈ ಹಿಂದೆ ಹೊರಡಿಸಿದ್ದ ಎರಡನೇ ಡೆತ್ ವಾರಂಟ್ ಪ್ರಕಾರ ನಾಲ್ವರೂ ಅಪರಾಧಿಗಳನ್ನು ಫೆ.1 ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸಬೇಕಾಗಿತ್ತು. ಆದರೆ ಎರಡನೇ ಅಪರಾಧಿ ವಿನಯ್ ಶರ್ವ, ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ಗಲ್ಲುಶಿಕ್ಷೆ ಜಾರಿಗೆ ತಡೆ ಕೋರಿ ಅಪರಾಧಿಗಳ ಪರ ವಕೀಲರು ಮನವಿ ಮಾಡಿದ್ದರು. ಈ ಹಿನ್ನೆಲೆ ಕೋರ್ಟ್ ತನ್ನ ಮುಂದಿನ ಆದೇಶದ ವರೆಗೆ ಶಿಕ್ಷೆಯನ್ನು ಮುಂದೂಡಿತು. ಈ ಬೆನ್ನಲ್ಲೇ ವಿನಯ್ನ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದರಾದರೂ ಮತ್ತೋರ್ವ ಅಪರಾಧಿ ಅಕ್ಷಯ್ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಕೇಂದ್ರ ಮತ್ತು ತಿಹಾರ್ ಜೈಲು ಆಡಳಿತ ಕಳೆದ ವಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನಾಲ್ವರೂ ಅಪರಾಧಿಗಳು ಇನ್ನೊಂದು ವಾರದಲ್ಲಿ ತಮ್ಮ ಎಲ್ಲ ಕಾನೂನು ಅವಕಾಶಗಳನ್ನು ಮುಗಿಸಬೇಕು ಎಂದು ಆದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 8 =
Remember me
