ನವದೆಹಲಿ:ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳ ಗಲ್ಲುಶಿಕ್ಷೆಗೆ ತಡೆನೀಡಿದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್​ ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಫೆ.11 ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಗಲ್ಲುಶಿಕ್ಷೆ ವಿಚಾರದಲ್ಲಿ ಮತ್ತಷ್ಟು ವಿಳಂಬವಾಗಬಹುದು. ಹೀಗಾಗಿ ಕೇಂದ್ರದ ಅರ್ಜಿಯ ಮೇಲೆ ನಾಲ್ವರು ಅಪರಾಧಿಗಳಿಗೆ ನೋಟಿಸ್​​ ಹೊರಡಿಸಬೇಕು ಎಂದು ಕೇಂದ್ರದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಅವರು ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಗಂಭೀರವಾಗಿ ಪರಿಗಣಿಸದೇ ಇರುವ ನ್ಯಾಯಮೂರ್ತಿ ಆರ್​. ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠವು ಫೆ. 11ರಂದು ವಿಚಾರಣೆಯನ್ನು ಕೈತ್ತಿಕೊಳ್ಳಲಾಗುವುದು. ನೋಟಿಸ್​ ನೀಡಬೇಕೋ ಅಥವಾ ಬೇಡವೋ ಎಂದು ನಿರ್ಧರಿಸಲಾಗುವುದು ಎಂದು ಮೆಹ್ತಾ ಅವರಿಗೆ ತಿಳಿಸಿದೆ. ತ್ರಿಸದಸ್ಯ ಪೀಠವು ನ್ಯಾಯಮೂರ್ತಿಗಳಾದ ಅಶೋಕ್​ ಭೂಷಣ್​ ಮತ್ತು ಎ.ಎಸ್.ಬೋಪಣ್ಣ ಅವರನ್ನು ಒಳಗೊಂಡಿದೆ.
ಈ ಪ್ರಕರಣದಲ್ಲಿ ದೇಶದ ಜನತೆಯ ತಾಳ್ಮೆಯನ್ನು ಪರೀಕ್ಷಿಸಲಾಗುತ್ತಿದೆ. ಈ ವಿಚಾರದಲ್ಲಿ ಪೀಠವು ಕೂಡ ಕಾನೂನನ್ನು ಬಿಟ್ಟುಕೊಡುತ್ತಿದೆ ಎಂದು ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 4 =
Remember me
