ನವದೆಹಲಿ:ನಿರ್ಭಯಾ ಪ್ರಕರಣದ ಅಪರಾಧಿ ಪವನ್​ ಗುಪ್ತ ಸುಪ್ರೀಂಕೋರ್ಟ್​ಗೆ ಶುಕ್ರವಾರ ಕ್ಯುರೇಟಿವ್​​ ಅರ್ಜಿಯನ್ನು ಸಲ್ಲಿಸಿದ್ದಾನೆ. ಈಗಾಗಲೇ ಮೂವರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್​ ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದ್ದು, ಮಾರ್ಚ್​ 3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ.
ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಅಪರಾಧಿ ಪವನ್​ ಗುಪ್ತ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ ಮುಂದಕ್ಕೆ ಹೋಗಿದ್ದು, ಈ ತಿಂಗಳ ಆರಂಭದಲ್ಲಿ ಪಟಿಯಾಲ ಹೌಸ್​ ಕೋರ್ಟ್​ ಹೊಸದಾಗಿ ಡೆತ್​ ವಾರೆಂಟ್​ ಅನ್ನು ವಿತರಿಸಿದೆ.
ಕಳೆದ ಮಂಗಳವಾರ ನ್ಯಾಯಮೂರ್ತಿ ಆರ್​. ಭಾನುಮತಿ, ಅಶೋಕ್​ ಭೂಷಣ್​ ಮತ್ತು ನವೀನ್​ ಸಿನ್ಹಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು. ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕೆಂದು ದೆಹಲಿ ಹೈಕೋರ್ಟ್​ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ನಿರ್ಭಯಾ ಪಾಲಕರು ಕೂಡ ಇದನ್ನೇ ಪ್ರಶ್ನಿಸಿ ಅರ್ಜಿ ದಾಖಲಿಸಿದ್ದಾರೆ.
ಈ ಸಂಬಂಧ ಸುಪ್ರೀಂಕೋರ್ಟ್​ ಮಾ.5 ರಂದು ವಿಚಾರಣೆ ನಡೆಸುವುದಾಗಿ ಹೇಳಿದ್ದು, ಈಗಾಗಲೇ ಮಾ.3 ರಂದು ಅಪರಾಧಿಗಳನ್ನು ಗಲ್ಲಿಗೇರಿಸಲು ಹೊರಡಿಸಿರುವ ವಾರಂಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
