ನವದೆಹಲಿ: ನಿರ್ಭಯಾ ಗ್ಯಾಂಗ್​ ರೇಪ್​ ಮತ್ತು ಹತ್ಯೆ ಪ್ರಕರಣದ ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿಯವರು ದಯಾ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಶುಕ್ರವಾರ ತಳ್ಳಿಹಾಕಿದೆ.
ನ್ಯಾಯಮೂರ್ತಿಗಳಾದ ಆರ್.ಬಾನುಮತಿ, ಅಶೋಕ್ ಭೂಷಣ್​, ಎ.ಎಸ್​.ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸಿದ್ದು, ರಾಷ್ಟ್ರಪತಿಯವರು ದಯಾ ಅರ್ಜಿ ತಿರಸ್ಕರಿಸಿದ್ದನ್ನು ನ್ಯಾಯಾಂಗ ಪರಾಮರ್ಶೆಗೆ ಒಳಪಡಿಸಲು ಯಾವುದೇ ಆಧಾರಗಳಿಲ್ಲ ಎಂದು ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿಹಾಕಿತು.
2012ರ ನಿರ್ಭಯಾ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ನಾಲ್ವರು ಅಪರಾಧಿಗಳ ಪೈಕಿ ವಿನಯ್ ಶರ್ಮಾ ಒಬ್ಬ. ಈತನ ದಯಾ ಅರ್ಜಿಯನ್ನು ರಾಷ್ಟ್ರಪತಿಯವರು ತಿರಸ್ಕರಿಸಿದ್ದರು. ರಾಷ್ಟ್ರಪತಿಯವರು ತರಾತುರಿಯಲ್ಲಿ ನಿರ್ಣಯ ತೆಗೆದುಕೊಂಡಿದ್ದಾರೆ. ಅದು ನ್ಯಾಯ ಸಮ್ಮತವಾಗಿಲ್ಲ ಎಂದು ಆರೋಪಿಸಿ ಶರ್ಮಾ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ನಿರ್ಭಯಾ ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್​(32), ಪವನ್ ಗುಪ್ತಾ(25), ವಿನಯ್ ಕುಮಾರ್ ಶರ್ಮಾ(26), ಅಕ್ಷಯ್ ಕುಮಾರ್ (31) ಅವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಜಾರಿಯನ್ನು ಜನವರಿ 31ರಂದು ಮುಂದಿನ ಆದೇಶದ ತನಕ ತಡೆ ಹಿಡಿದಿತ್ತು. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − ten =
Remember me
