ನವದೆಹಲಿ:ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ವರ್ಷದ ನ್ಯಾಷನಲ್​ ಇನ್​ಸ್ಟಿಟ್ಯೂಷನಲ್​ ರ‍್ಯಾಂಕಿಂಗ್​ ಫ್ರೇಮ್​ವರ್ಕ್​ (ಎನ್​ಐಆರ್​ಎಫ್​) ಶ್ರೇಣಿ ಪ್ರಕ್ರಿಯೆಯನ್ನು ಮುಂದೂಡಿದೆ.
ದೇಶದಲ್ಲಿ ಕರೊನಾ ಸೋಂಕು ವ್ಯಾಪಿಸುವುದನ್ನು ತಡೆಗಟ್ಟಲು ಶಾಲಾ-ಕಾಲೇಜು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಏಪ್ರಿಲ್​ 14ರವರೆಗೆ ಲಾಕ್​ಡೌನ್​ ಜಾರಿಯಲ್ಲಿದೆ. ಕಾರಣದಿಂದಾಗಿ ಎನ್​ಐಆರ್​ಎಫ್​ ಶ್ರೇಣಿ ನೀಡುವಿಕೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಕಳೆದ ವರ್ಷ ಏಪ್ರಿಲ್​ನಲ್ಲಿ ಎನ್​ಐಆರ್​ಎಫ್​ ರ‍್ಯಾಂಕಿಂಗ್ ಘೋಷಿಸಲಾಗಿತ್ತು. ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ಮದ್ರಾಸ್​ ಐಐಟಿ ಮೊದಲ ಸ್ಥಾನದಲ್ಲಿತ್ತು. ಎರಡನೇ ಸ್ಥಾನದಲ್ಲಿ ಬೆಂಗಳೂರಿನ ಐಐಎಸ್​ಸಿ ಇದ್ದರೆ, ಮೂರನೇ ಸ್ಥಾನವನ್ನು ದೆಹಲಿ ಐಐಟಿ ಪಡೆದುಕೊಂಡಿತ್ತು.ವ್ಯವಹಾರ ನಿರ್ವಹಣಾ ಸಂಸ್ಥೆಗಳ ಪೈಕಿ ಬೆಂಗಳೂರಿನ ಐಐಎಂ ಅಗ್ರಸ್ಥಾನದಲ್ಲಿತ್ತು. ಐಐಎಂ ಅಹಮದಾಬಾದ್​, ಐಐಎಂ ಕೋಲ್ಕತ್ತ ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದುಕೊಂಡಿದ್ದವು.
ದೇಶದಲ್ಲಿರುವ ಖಾಸಗಿ, ಅನುದಾನಿತ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳು, ಉನ್ನತ ಶಿಕ್ಷಣ ಸಂಸ್ಥೆಗಳ ಸಾಧನೆಯನ್ನು ಗುರುತಿಸಿ ಪ್ರತಿವರ್ಷ ಎನ್​ಐಆರ್​ಎಫ್​ ಅನ್ವಯ ಶ್ರೇಣಿಯನ್ನು ನೀಡಲಾಗುತ್ತದೆ.
ಸಿಎ ಆಕಾಂಕ್ಷಿಗಳಿಗೆ ಪ್ರಾಯೋಗಿಕ ತರಬೇತಿಯಿಂದ ಒಂದು ತಿಂಗಳು ವಿನಾಯ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
