ಜಾಮ್​ನಗರ:ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ಮುಗಿದಿದೆ. ನೀತಾ ಅಂಬಾನಿ ಹಾಗೂ ಅವರ ಜತೆಗೆ ಇತರರು ಸೇರಿ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಿದ್ದಾರೆ. ವಿಶ್ವಂಭರಿ ಸ್ತುತಿಗೆ ನೃತ್ಯ ಮಾಡಿದ್ದು, ವಿಶಾಲವಾದ ವೇದಿಕೆಯಲ್ಲಿ ಈ ಸಮಾರಂಭಕ್ಕೆ ಇನ್ನಷ್ಟು ಕಳೆ ಕಟ್ಟುವಂತೆ ಮಾಡಿದರು.
ಇದನ್ನೂ ಓದಿ:10 ದಿನಗಳು, 12 ರಾಜ್ಯಗಳು, 29 ಕಾರ್ಯಕ್ರಮಗಳು… ಮೋದಿಯವರ ಬಿರುಸಿನ ಪ್ರವಾಸದ ಮೆಗಾ ಪ್ಲಾನ್ ಏನು?
ಅಂದ ಹಾಗೆ, ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಸಹ ಅತ್ಯುತ್ತಮ ನೃತ್ಯಪಟು. ಹಾಗೂ ಕುಟುಂಬದ ಕಾರ್ಯಕ್ರಮಗಳಲ್ಲಿ ಸ್ವತಃ ನೀತಾ ಅಂಬಾನಿ ಅವರು ಈ ಹಿಂದೆಯೂ ಸಹ ನೃತ್ಯ ಪ್ರದರ್ಶನವನ್ನು ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಭಾರತೀಯ ಸಂಪ್ರದಾಯದಂತೆ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಅತಿಥಿ ಸತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವತಾ ಆರಾಧನೆ ಹೀಗೆ ವಿವಿಧ ರೀತಿಯ ಆಚರಣೆಗಳನ್ನು ಮಾಡಲಾಯಿತು.
ಅನಂತ್ ಹಾಗೂ ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಎಲ್ಲವನ್ನೂ ಭಾರತೀಯ ಸಂಪ್ರದಾಯದಂತೆಯೇ ಮಾಡಲಾಗುತ್ತಿದೆ. ದೇಶ-ವಿದೇಶಗಳಿಂದ ವಿಶೇಷವಾದ ಅತಿಥಿಗಳು ಬರುತ್ತಿದ್ದಾರೆ. ಸ್ಥಳೀಯ ಕಲಾವಿದರು ಅದ್ಭುತವಾಗಿ ಜಾಮ್ ನಗರದಲ್ಲಿ ಮದುವೆ ಪೂರ್ವ ಕಾರ್ಯಕ್ರಮ ನಡೆಯುವ ಸ್ಥಳವನ್ನು ಸಿದ್ಧಗೊಳಿಸಿದರು. ಅಂಬಾನಿ ಕುಟುಂಬದ ಸದಸ್ಯರೇ ಸ್ವತಃ ಸ್ಥಳೀಯರಿಗೆ ಅನ್ನ- ಸಂತರ್ಪಣೆಯನ್ನು ಮಾಡಿದರು.
ಇದನ್ನೂ ಓದಿ:ಪಾಕಿಸ್ತಾನದಲ್ಲಿ ಮಳೆಯಿಂದಾಗಿ 37 ಜನರು ಸಾವು; ಉತ್ತರ ಪಾಕ್ ಕಡೆಗೆ ಪ್ರಯಾಣಿಸದಂತೆ ಅಧಿಕಾರಿಗಳ ಸೂಚನೆ
ಇದೀಗ ನೀತಾ ಅಂಬಾನಿ ಮತ್ತು ಅವರ ಜತೆಗೆ ದೊಡ್ಡ ತಂಡವೊಂದು ತುಂಬ ಸುಂದರವಾದ ವೇದಿಕೆ ಮೇಲೆ ವಿಶ್ವಂಭರಿ ಸ್ತುತಿಗೆ ನೃತ್ಯ ಮಾಡುತ್ತಾ, ತಾಯಿ ಭಗವತಿ ಹಾಗೂ ಸ್ತ್ರೀ ಶಕ್ತಿಯ ಅದ್ಭುತವನ್ನು ತಿಳಿಸುವಂಥ ಪ್ರದರ್ಶನವನ್ನು ನೀಡಿದ್ದಾರೆ. ಡ್ಯಾನ್ಸ್​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Celebrating tradition and invoking the divine, Mrs. Neeta Ambani ji presents a stirring performance to the Vishwambhari Stuti, a sacred hymn dedicated to Maa Ambe, the embodiment of power & strength.At#AnantRadhikaPreWeddingcelebration.#AnantRadhika#NitaAmbanipic.twitter.com/G1vyN7Mzxl— Mahant Adityanath 2.0🦁 (@MahantYogiG)March 3, 2024
Celebrating tradition and invoking the divine, Mrs. Neeta Ambani ji presents a stirring performance to the Vishwambhari Stuti, a sacred hymn dedicated to Maa Ambe, the embodiment of power & strength.At#AnantRadhikaPreWeddingcelebration.#AnantRadhika#NitaAmbanipic.twitter.com/G1vyN7Mzxl
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + ten =
Remember me
