ಗುಜರಾತ್:ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್​ ಅವರ ವಿವಾಹ ಪೂರ್ವ ಕಾರ್ಯಕ್ರಮವನ್ನು ಮಾರ್ಚ್ 1ರಿಂದ ಮಾರ್ಚ್ 3ರವರೆಗೆ ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ದೇಶ-ವಿದೇಶಗಳಿಂದ ಗಣ್ಯಾತಿ ಗಣ್ಯರು ಆಗಮಿಸಿ, ನವಜೋಡಿಗಳಿಗೆ ಶುಭಹಾರೈಸಿದರು.
ಇದನ್ನೂ ಓದಿ:ಈ ಫೋಟೋದಲ್ಲಿರುವ ಅಕ್ಕ-ತಂಗಿಯರ ಪೈಕಿ ಒಬ್ಬರು ಇಂದು ಸ್ಟಾರ್​ ನಟಿ! ಮತ್ತೊಬ್ಬರು?
ಅದ್ದೂರಿ ಪ್ರೀ-ವೆಡ್ಡಿಂಗ್​ನಲ್ಲಿ ಬಾಲಿವುಡ್‌, ಹಾಲಿವುಡ್‌ನ ತಾರೆಯರು ಭಾಗವಹಿಸಿ ಮದುವೆಯ ವಿವಾಹ ಪೂರ್ವ ಕಾರ್ಯಕ್ರಮದ ರಂಗನ್ನು ಮತ್ತಷ್ಟು ಹೆಚ್ಚಿಸಿದರು. ಕ್ರಿಕೆಟಿಗರಾದ ಮಹೇಂದ್ರ ಸಿಂಗ್ ಧೋನಿ ಮತ್ತು ದ್ವೇನ್ ಬ್ರಾವೋ ದಾಂಡಿಯಾ ಆಡುವ ಮೂಲಕ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಈವೆಂಟ್​ನ ಹಲವು ಫೋಟೋಗಳು ಮತ್ತು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ.
ಎಲ್ಲಾ ಗಣ್ಯರಂತೆ ತಾನು ಕೂಡ ಅನಂತ್​-ರಾಧಿಕಾ ಪ್ರೀ-ವೆಡ್ಡಿಂಗ್ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯಗೆ ಸಂಭ್ರಮದಲ್ಲಿ ಕುಣಿಯದಂತೆ ನೀತಾ ಅಂಬಾನಿ ಎಚ್ಚರಿಸಿದ್ದಾರೆ. ಕಳೆದ ವರ್ಷ ಆ್ಯಂಕಲ್ ಇಂಜುರಿಯಿಂದ ಅಂತಾರಾಷ್ಟ್ರೀಯ ಪಂದ್ಯದಿಂದ ಹೊರಗುಳಿದ ಹಾರ್ದಿಕ್​, ಇದೀಗ ಗಾಯದಿಂದ ಚೇತರಿಸಿಕೊಂಡಿದ್ದು, ಐಪಿಎಲ್ 2024ರ ಆವೃತ್ತಿಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್​ಗೆ ಯಾರೆಲ್ಲಾ ಆಗಮಿಸಿದ್ದರು? ಇಲ್ಲಿವೆ ನೋಡಿ ಗಣ್ಯರ ಫೋಟೋಸ್​!
ಈ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಮಾಲೀಕರಾದ ನೀತಾ ಅಂಬಾನಿ ತಮ್ಮ ತಂಡದ ನೂತನ ಕ್ಯಾಪ್ಟನ್ ಆದ ಹಾರ್ದಿಕ್ ಪಾಂಡ್ಯಗೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದು ಬೇಡ. ಇದರಿಂದ ಕಾಲಿಗೆ ಪೆಟ್ಟು ಬೀಳಬಹುದು ಎಚ್ಚರ. ಇದರಿಂದ ಮತ್ತಷ್ಟು ತೊಂದರೆಯಾಗಬಹುದು ಹುಷಾರು ಎಂದಿದ್ದಾರೆ,(ಏಜೆನ್ಸೀಸ್).
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
