ಮುಂಬೈ:ಕೋವಿಡ್‌ ಸಂಕಷ್ಟ ಕಾಲದಲ್ಲಿ ಉದ್ಯಮಿ ನೀತಾ ಅಂಬಾನಿ ನೇತೃತ್ವದ ರಿಲಯನ್ಸ್‌ ಫೌಂಡೇಷನ್‌ ಗಮನಾರ್ಹ ಸೇವೆ ನೀಡುತ್ತಿದ್ದು, ಕರೊನಾ ಸಂಕಷ್ಟದಲ್ಲಿರುವವರಿಗೆ ದೇಶಾದ್ಯಂತ ಅಗತ್ಯ ವೈದ್ಯಕೀಯ ಸೌಕರ್ಯ ನೀಡುವ ಮೂಲಕ ಮಿಡಿಯುತ್ತಿದೆ. ಇತ್ತೀಚೆಗಷ್ಟೇ ಮುಂಬೈನಲ್ಲಿ ಇಂಥದ್ದೊಂದು ವ್ಯವಸ್ಥೆ ಕಲ್ಪಿಸಿರುವ ರಿಲಯನ್ಸ್‌ ಫೌಂಡೇಷನ್‌ ಈಗ ಮತ್ತೊಂದು ರಾಜ್ಯಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದೆ.
ಗುಜರಾತ್‌ನ ಜಾಮ್‌ನಗರದಲ್ಲಿ 1000 ಬೆಡ್‌ಗಳ ಕೋವಿಡ್‌ ಕೇರ್‌ ಕೇಂದ್ರ ಸ್ಥಾಪಿಸಲು ಮುಂದಾಗಿರುವ ರಿಲಯನ್ಸ್‌ ಫೌಂಡೇಷನ್‌, ಎರಡು ಹಂತದಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸಲಿದೆ. ಮೊದಲಿಗೆ ಆಮ್ಲಜನಕ ಪೂರೈಕೆ ಇರುವ 400 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರ ಇನ್ನೊಂದು ವಾರದಲ್ಲಿ ಸೇವೆಗೆ ಸಜ್ಜಾಗಲಿದೆ. ಇದನ್ನು ಜಾಮ್‌ನಗರದ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ನಿರ್ವಹಿಸಲಿದೆ. ನಂತರ ಇನ್ನೆರಡು ವಾರಗಳಲ್ಲಿ ಜಾಮ್‌ನಗರದ ಮತ್ತೊಂದು ಪ್ರದೇಶದಲ್ಲಿ 600 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರ ಸ್ಥಾಪನೆಗೊಳ್ಳಲಿದೆ.
ಈ ಕೇಂದ್ರಗಳಿಗೆ ಅಗತ್ಯವಿರುವ ಮಾನವಸಂಪನ್ಮೂಲ, ವೈದ್ಯಕೀಯ ಬೆಂಬಲ, ಉಪಕರಣ ಹಾಗೂ ಇತರ ವಸ್ತುಗಳನ್ನು ರಿಲಯನ್ಸ್‌ ಸಂಸ್ಥೆಯೇ ಪೂರೈಸಲಿದ್ದು, ಸೋಂಕಿತರೆಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುವುದು. ಇನ್ನು ಅಗತ್ಯವಿರುವ ವೈದ್ಯ ಹಾಗೂ ಶುಶ್ರೂಷಾ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ನೋಡಿಕೊಳ್ಳಲಿದೆ.
ಇದನ್ನೂ ಓದಿ:ಉಸಿರಾಟದ ಸಮಸ್ಯೆಯೇ..? ತುರ್ತು ಪರಿಹಾರಕ್ಕೆ ಇಲ್ಲಿದೆ ಸುಲಭದ ಮನೆಮದ್ದು..
ಭಾರತ ಕರೊನಾ ಎರಡನೇ ಅಲೆಯ ವಿರುದ್ಧ ಹೋರಾಡುತ್ತಿರುವ ಈ ಸಂದರ್ಭದಲ್ಲಿ ನಾವು ಎಲ್ಲ ರೀತಿಯಲ್ಲೂ ಸಹಾಯ ಮಾಡಲು ಬದ್ಧರಿದ್ದೇವೆ. ಅದರಲ್ಲೂ ಇಂಥ ಸಂಕಷ್ಟದ ಸಂದರ್ಭದಲ್ಲಿ ಹೆಚ್ಚುವರಿ ವೈದ್ಯಕೀಯ ಸೌಕರ್ಯ ಅನಿವಾರ್ಯ. ಹೀಗಾಗಿ ಗುಜರಾತ್‌ನ ಜಾಮ್‌ನಗರದಲ್ಲಿ 1000 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರ ವ್ಯವಸ್ಥೆ ಮಾಡಿಕೊಡುತ್ತಿದ್ದೇವೆ ಎಂದು ರಿಲಯನ್ಸ್‌ ಫೌಂಡೇಷನ್‌ನ ಸಂಸ್ಥಾಪಕಿ ಹಾಗೂ ಅಧ್ಯಕ್ಷೆ ನೀತಾ ಅಂಬಾನಿ ಹೇಳಿದ್ದಾರೆ.

ಕೋವಿಡ್‌ ಸಂಕಷ್ಟದ ಈ ಸಂದರ್ಭದಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ, ಗುಜರಾತ್‌ ಮುಖ್ಯಮಂತ್ರಿ ವಿಜಯ್‌ಭಾಯಿ ರೂಪಾನಿ ಬಿಡುವಿರದೆ ಶ್ರಮವಹಿಸಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಂಕ್ರಾಮಿಕ ಪಿಡುಗಿನ ಇಂಥ ತುರ್ತು ಪರಿಸ್ಥಿತಿಯಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಲು ನಮ್ಮ ಸಿಎಂಡಿ ಮುಖೇಶ್‌ ಅಂಬಾನಿ ಮುಂದೆ ಬಂದಿದ್ದು, ಈ ಎರಡು ಕೋವಿಡ್‌ ಕೇರ್‌ ಕೇಂದ್ರಗಳನ್ನು ಶೀಘ್ರದಲ್ಲೇ ಸೇವೆಗೆ ಸಜ್ಜುಗೊಳಿಸಿ ಕೊಡಲಾಗುವುದು ಎಂದು ರಿಲಯನ್ಸ್‌ ಇಂಡಸ್ಟ್ರೀಸ್‌ನ ಗ್ರೂಪ್‌ ಪ್ರೆಸಿಡೆಂಟ್‌ ಧನರಾಜ್‌ ನಥವಾನಿ ತಿಳಿಸಿದ್ದಾರೆ.
ಇದನ್ನೂ ಓದಿ:ಲಿಂಬೆರಸ, ಕೊಬ್ಬರಿ ಎಣ್ಣೆ, ಸ್ಟೀಮ್, ಬಿಸಿ ನೀರು: ಕರೊನಾಗೆ ಮನೆಮದ್ದು- ಡಾ. ವಿಜಯ ಸಂಕೇಶ್ವರ ಸಲಹೆ
ಮುಂಬೈನಲ್ಲಿ ರಿಲಯನ್ಸ್​ ಫೌಂಡೇಷನ್​ ಕೋವಿಡ್ ಕಾರ್ಯಾಚರಣೆ ಹೆಚ್ಚಳ; ಉಚಿತವಾಗಿ 775 ಬೆಡ್​ಗಳ​ ವ್ಯವಸ್ಥೆ
ರಿಲಯನ್ಸ್‌ನ ‘ಒನ್ ಸ್ಟಾಪ್ ಬ್ರೆಸ್ಟ್ ಕ್ಲಿನಿಕ್’ಗೆ ಚಾಲನೆ ನೀಡಿದ ನೀತಾ ಅಂಬಾನಿ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
