ನಾಗ್​ಪುರ:ರಾಜಕಾರಣಿಯೊಬ್ಬರು ತಮಗೆ ಅವರ ಪಕ್ಷ ಸೇರಲು ಆಫರ್ ಮಾಡಿದ್ದರು ಎಂದು ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ನಿತಿನ್ ಗಡ್ಕರಿ ನೆನಪಿಸಿಕೊಂಡಿದ್ದಾರೆ. ಆಗ, “ಈ ಪಕ್ಷದ ಸದಸ್ಯನಾಗುವುದಕ್ಕಿಂತ ಬಾವಿಗೆ ಹಾರಿ ಸಾಯುವುದೇ ಮೇಲು” ಎಂದು ಉತ್ತರಿಸಿದ ಬಗ್ಗೆ ಸಭೆಯೊಂದರಲ್ಲಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ; ಎನ್​ಐಎ ಅಧಿಕಾರಿಗಳಿಂದ ಎಫ್​​ಐಆರ್​​​ ದಾಖಲು
ಕಾಂಗ್ರೆಸ್ ತನ್ನ 60 ವರ್ಷಗಳ ಆಡಳಿತದಲ್ಲಿ ಮಾಡಿದ್ದ ಕೆಲಸಕ್ಕೆ ಹೋಲಿಸಿದರೆ ಕಳೆದ ಒಂಬತ್ತು ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ದೇಶದಲ್ಲಿ ಎರಡು ಪಟ್ಟು ಕೆಲಸ ಮಾಡಿದೆ ಎಂದು ನಿತಿನ್ ಗಡ್ಕರಿ ಹೇಳಿದರು.
ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ಭಂಡಾರಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಬಿಜೆಪಿಗಾಗಿ ಕೆಲಸ ಮಾಡಿದ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದು ಪಕ್ಷದಲ್ಲಿನ ತಮ್ಮ ಪ್ರಯಾಣದ ಬಗ್ಗೆ ಮಾತನಾಡಿದರು.
ಇದನ್ನೂ ಓದಿ:ವಿಮಾನಯಾನ ಅವಲಂಬನೆ ತಗ್ಗಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೀಗೊಂದು ಭವಿಷ್ಯ ನುಡಿದಿದ್ದೇಕೆ?ದಿವಂಗತ ಕಾಂಗ್ರೆಸ್ ನಾಯಕ ಶ್ರೀಕಾಂತ್ ಜಿಚ್ಕರ್ ಒಮ್ಮೆ ನೀಡಿದ ಆಫರ್​ಅನ್ನು ಅವರು ನೆನಪಿಸಿಕೊಂಡ ನಿತಿನ್​ ಗಡ್ಕರಿ “ಜಿಚ್ಕರ್ ಒಮ್ಮೆ ನನಗೆ ‘ನೀವು ಪಕ್ಷದ ಉತ್ತಮ ಕಾರ್ಯಕರ್ತ ಮತ್ತು ನಾಯಕ. ನೀವು ಕಾಂಗ್ರೆಸ್ ಸೇರಿದರೆ, ನಿಮಗೆ ಉಜ್ವಲ ಭವಿಷ್ಯವಿದೆ’ ಎಂದು ಹೇಳಿದ್ದರು. ಆದರೆ ನಾನು ಅವರಿಗೆ ಹೇಳಿದ್ದು ಏಕೆಂದರೆ ನಾನು ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರುತ್ತೇನೆ. ಬಿಜೆಪಿ ಮತ್ತು ಅದರ ಸಿದ್ಧಾಂತದಲ್ಲಿ ಬಲವಾದ ನಂಬಿಕೆಯನ್ನು ಹೊಂದಿದ್ದು ನಾವು ಅದಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಗಡ್ಕರಿ ಹೇಳಿದರು.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve − ten =
Remember me
