ಪಟನಾ:ಸಾಮಾನ್ಯವಾಗಿ ರಾಜಕೀಯ ನಾಯಕರು ಚುನಾವಣಾ ಪ್ರಚಾರಗಳಲ್ಲಿ ಮಾತನಾಡುವಾಗ ಸ್ವಲ್ಪ ಹೆಚ್ಚೆನಿಸುವಷ್ಟೇ ಭಾವುಕವಾಗುವುದು ನಮಗೆಲ್ಲ ಗೊತ್ತಿರುವ ವಿಚಾರ. ಅದೇ ರೀತಿ ಬಿಹಾರ ಚುನಾವಣೆಯಲ್ಲಿ ಭಾವುಕ ಭಾಷಣ ಮಾಡಿದ್ದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಇದೀಗ ಉಲ್ಟಾ ಹೊಡೆದಿದ್ದಾರೆ.
ಇದನ್ನೂ ಓದಿ:ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್​ ಆದೇಶ: 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ
ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ನಿತೀಶ್​ ಕುಮಾರ್​, ವೇದಿಕೆಯ ಮೇಲೆ ನಿಂತು ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಚುನಾವಣೆ ಮುಗಿದು ಅದರ ಫಲಿತಾಂಶವೂ ಹೊರಬಿದ್ದಿದೆ. ನಿತೀಶ್​ ಕುಮಾರ್​ ಅವರ ಜೆಡಿಯು ಮತ್ತು ಬಿಜೆಪಿ ಪಕ್ಷದ ಮೈತ್ರಿ ಜಯಭೇರಿ ಬಾರಿಸಿದೆ. ಇದೀಗ ತಾವು ರಾಜಕೀಯ ನಿವೃತ್ತಿ ಬಗ್ಗೆ ಮಾತೇ ಆಡಿಲ್ಲ ಎಂದು ನಿತೀಶ್​ ಕುಮಾರ್​ ಹೇಳಿದ್ದಾರೆ.
ನಾನು ಚುನಾವಣಾ ಪ್ರಚಾರದಲ್ಲಿ ಮಾಡಿದ ಭಾಷಣವನ್ನು ಮಾಧ್ಯಮದವರು ತಪ್ಪಾಗಿ ಗ್ರಹಿಸಿದ್ದಾರೆ. ಒಳ್ಳೆಯದಾಗಿ ಮುಗಿದರೆ ಎಲ್ಲವೂ ಒಳ್ಳೆಯದೇ ಎಂದು ನಾನು ಹೇಳಿದ್ದೆ. ಆದರೆ ಅದನ್ನು ನಾನು ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂದು ಬಿಂಬಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಆತಂಕದ ನಡುವೆ ದೀಪಾವಳಿ ಸಂಭ್ರಮ ; ನಿಗಾ ವಹಿಸಲು ಜಿಲ್ಲಾಡಳಿತದಿಮದ ಕಾರ್ಯಪಡೆ ರಚನೆ
ರಾಜ್ಯದ ಜನತೆ ಬಯಸುವುದಾದರೆ ಇದೇ ಹುಮ್ಮಸ್ಸಿನೊಂದಿಗೆ ಕೆಲಸ ಮುಂದುವರಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. (ಏಜೆನ್ಸೀಸ್​)
ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಮಗ ಅರೆಸ್ಟ್​; ಅಪ್ಪನಿಗೆ ರಜೆ ಕೊಟ್ಟು ಆರೈಕೆ ಮಾಡುತ್ತಿರುವ ಕೇರಳ ಸರ್ಕಾರ

ಐಪಿಎಲ್​ನಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಕೋಳಿ ಸಾಕಲು ಹೊರಟ ಧೋನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 11 =
Remember me
