ಮಧ್ಯಪ್ರದೇಶ:ಮಂಡ್ಲಾದಿಂದ ಜಬಲ್​ಪುರ ನಡುವಿನ ದ್ವಿಪಥ ಹೆದ್ದಾರಿ 400 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಾಗುತ್ತಿದೆ. ಆದರೆ ಈ ಹೆದ್ದಾರಿಯ ಬರೇಲಾದಿಂದ ಮಂಡ್ಲಾವರೆಗಿನ ಕಾಮಗಾರಿಯ ಒಂದು ಭಾಗವನ್ನು ಕೆಟ್ಟದಾಗಿ ನಿರ್ಮಾಣ ಮಾಡಲಾಗಿದೆ. ಇದು ನನಗೆ ತೃಪ್ತಿ ನೀಡಿಲ್ಲ ಎಂದು ಹೇಳಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಸಾರ್ವಜನಿಕರಲ್ಲಿ ಕ್ಷಮೆಯಾಚಿಸಿದ್ದಾರೆ. ನಂತರ ಕಳಪೆ ಕಾಮಗಾರಿ ಆಗಿರುವ ಭಾಗವನ್ನು ಪುನಃ ಸರಿಪಡಿಸಲಾಗುವುದು. ಇದಕ್ಕಾಗಿ ಹೊಸ ಗುತ್ತಿಗೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ರಸ್ತೆ ಸಮಸ್ಯೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇದು ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಅಧಿಕಾರಿಗಳಲ್ಲಿ ಚರ್ಚಿಸಿದ್ದೇನೆ. ಶೀಘ್ರದಲ್ಲಿಯೇ ಉತ್ತಮವಾದ ರಸ್ತೆ ನಿರ್ಮಾಣ ಆಗಲಿದೆ. ಈವರೆಗೆ ನೀವು ಎದುರಿಸಿದ ಸಮಸ್ಯೆಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಇತ್ತೀಚೆಗೆ ಗಡ್ಕರಿ ಮಾತನಾಡುತ್ತಾ, ಎರಡು ಬಾರಿ ಪ್ರಧಾನಿಯಾಗಿ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್​ ಅವರ ಆರ್ಥಿಕ ಸುಧಾರಣೆಗೆ ದೇಶ ಋಣಿಯಾಗಿದೆ ಎಂದು ಹೇಳಿಕೆ ನೀಡಿದ್ದರು. ಇದೀಗ ರಸ್ತೆ ಕಾಮಗಾರಿ ಸರಿಯಾಗಿ ನಡೆಯದೇ ಇರುವುದಕ್ಕೆ ಜನರ ಬಳಿ ಕ್ಷೇಮೆ ಕೇಳಿ ಸುದ್ದಿಯಾಗಿದ್ದಾರೆ. ಕೇಂದ್ರ ಸಚಿವ ಗಡ್ಕರಿ ಅವರ ಈ ನಡೆ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 3 =
Remember me
