ನವದೆಹಲಿ:ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳು(ಇವಿ) ಬೆಲೆಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆಯಿದೆ. ಏಕೆಂದರೆ ಈ ವಾಹನಗಳಿಗೆ ಸರ್ಕಾರದ ಸಬ್ಸಿಡಿ ಅಗತ್ಯವಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಇದನ್ನೂ ಓದಿ:ಇಬ್ಬರು ಗಂಡುಮಕ್ಕಳ ಮೃತದೇಹ ಹೊತ್ತು ಕೆಸರಲ್ಲಿ 15ಕಿಮೀ ನಡೆದ ತಂದೆ-ತಾಯಿ!
ಬೇಡಿಕೆ ಹೆಚ್ಚಳ ಹಾಗೂ ಉತ್ಪಾದನಾ ವೆಚ್ಚ ತಗ್ಗಿರುವುದರಿಂದ ಇನ್ನು ಮುಂದೆ ಸಬ್ಸಿಡಿ ಅಗತ್ಯವಿಲ್ಲ ಎಂದು ದೆಹಲಿಯಲ್ಲಿ ನಡೆದ ಬ್ಲೂಮ್‌ಬರ್ಗ್ ಎನ್‌ಇಎಫ್ ಶೃಂಗಸಭೆಯಲ್ಲಿ ಗಡ್ಕರಿ ಇದನ್ನು ಹೇಳಿದ್ದಾರೆ.
ಆರಂಭಿಕ ವೆಚ್ಚ ಹೆಚ್ಚಾಗಿತ್ತು, ಆದರೆ ಬೇಡಿಕೆ ಹೆಚ್ಚಿದಂತೆ ಉತ್ಪಾದನಾ ವೆಚ್ಚ ಕಡಿಮೆಯಾಯಿತು ಎಂದು ಅವರು ಅಭಿಪ್ರಾಯಪಟ್ಟರು.
ಎಲೆಕ್ಟ್ರಿಕ್ ವಾಹನಗಳಿಗೆ ಈಗಾಗಲೇ ಉತ್ತಮ ತೆರಿಗೆ ರಿಯಾಯಿತಿ ಇದೆ. ಇವುಗಳ ಮೇಲಿನ ಜಿಎಸ್‌ಟಿ ಕೇವಲ ಶೇ.5 ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಇದು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಇನ್ನು ಮುಂದೆ ಸಬ್ಸಿಡಿ ಬೇಡಿಕೆ ನೀಡಲು ಬರುವುದಿಲ್ಲ ಎಂದು ಕೇಂದ್ರ ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಇನ್ನೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅವಲಂಬಿತವಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಆದರೂ ಈ ವಾಹನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಆಲೋಚನೆ ಸರ್ಕಾರಕ್ಕೆ ಇಲ್ಲ. ಪೆಟ್ರೋಲ್ ಡೀಸೆಲ್ ವಾಹನಗಳ ಅವಲಂಬನೆಯಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ ಮತ್ತು ಈ ಪ್ರಕ್ರಿಯೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿತಿನ್ ಗಡ್ಕರಿ ಹೇಳಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
